ವಿಟ್ಲ : ಶತಮಾನೋತ್ತರ 25ನೇ ವರ್ಷದ ಸಂಭ್ರಮದಲ್ಲಿರುವ ಬರಿಮಾರು ಚರ್ಚ್‌ನಲ್ಲಿ ನಡೆದ ಅವಿಸ್ಮರಣೀಯ ಕಾರ್ಯಕ್ರಮ ಹೊಸ ಪ್ರೇರಣೆ ನೀಡಿದೆ.
ಇದರಲ್ಲಿ ಪಾಲ್ಗೊಂಡು ಸಂತಸವಾಗಿದೆ. ದೇವರ ಅನುಗ್ರಹದೊಂದಿಗೆ ಶತಮಾನೋತ್ತರ ಬೆಳ್ಳಿ ಹಬ್ಬದ ಎಲ್ಲ ಕಾರ್ಯಕ್ರಮಗಳೂ ಯಶಸ್ವಿಯಾಗಲಿ ಎಂದು ಕರ್ನಾಟಕದ ಆರ್ಚ್ ಬಿಷಪ್ ರೈ| ರೆ| ಡಾ| ಪೀಟರ್ ಮಚಾದೊ ಹಾರೈಸಿದರು.
ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬರಿಮಾರು ಚರ್ಚ್‌ಗೆ ಸೋಮವಾರ ಭೇಟಿ ನೀಡಿದ ಅವರು, ದಿವ್ಯ ಬಲಿಪೂಜೆ ಮತ್ತು ಕಮ್ಯುನಿಯನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ಮಕ್ಕಳಾದ ಐಶಲ್ ಮಾರ್ಟಿಸ್, ಲೆನೊರಾ ಸಾನ್ಸಿಯಾ ಪಿಂಟೊ, ನತಾಶ ಮೆಂಡೊನ್ಸಾ, ಒಲಿಶಾ ನೊರೊನ್ಹಾ, ರಿಯೋನ್ ಪಾವ್É ಮಾರ್ಟಿಸ್ ಮತ್ತು ಶರುನ್ ರೊಡ್ರಿಗಸ್ ಅವರಿಗೆ ಪ್ರಥಮ ಬಾರಿಯ ಪರಮ ಪ್ರಸಾದ ನೀಡಿ ಹರಸಿದ ಅವರು, ಉನ್ನತ ಆದರ್ಶಗಳೊಂದಿಗೆ ಜೀವನ ಸಾಗಿಸಲು ಕರೆ ನೀಡಿದರು.
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ| ಡಾ| ಲಾರೆನ್ಸ್ ಮುಕ್ಕುಝಿ, ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಮಾತನಾಡಿದರು. ಪರಮಪ್ರಸಾದ ಸ್ವೀಕರಿಸಿದ ಮಕ್ಕಳಿಗೆ ಮತ್ತು ಹೆತ್ತವರಿಗೆ ಪಕ್ಷಿಕೆರೆ ಚರ್ಚಿನ ಧರ್ಮಗುರು ಫಾ| ಮೆಲ್ವಿನ್ ನೊರೋನ್ಹಾ ಅವರು ಎಲ್ಲ ಧರ್ಮಗುರುಗಳ ಪರವಾಗಿ ಆಶೀರ್ವಚನ ನೀಡಿದರು.
ಮಂಗಳೂರು ಧರ್ಮಪ್ರಾಂತದ ವಿವಿಧ ಚರ್ಚ್‌ಗಳ ಧರ್ಮಗುರುಗಳು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಚರ್ಚ್‌ನ ಪ್ರಧಾನ ಧರ್ಮಗುರು ಫಾ| ಗ್ರೆಗರಿ ಪಿರೇರಾ ಮತ್ತು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್, ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಶಿಕ್ಷಕಿ ಮೇರಿ ಡಿ’ಸೋಜಾ ಉಪಸ್ಥಿತರಿದ್ದರು. ಸ್ಟೇನಿ ಡಿ’ಸೋಜಾ ಮತ್ತು ಇವಿÉàನ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭ ಆರ್ಚ್ ಬಿಷಪ್ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು.