ಆದರೆ, ಸಿದ್ಧಗಂಗಾ ಶ್ರೀಗಳ ಗುರುವಂದನಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಆಹ್ವಾನಿಸಲು ಬಂದಿದ್ದಾಗಿ ಸ್ಪಷ್ಟಪಡಿಸಿರುವ ಎಚ್.ಸಿ.ಬಾಲಕೃಷ್ಣ, ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
Advertisement
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿದ್ದ ಬಾಲಕೃಷ್ಣ ಕೆಲಕಾಲ ಸಮಾಲೋಚನೆ ಮಾಡಿ ನಿರ್ಗಮಿಸಿದರು. ಸುದ್ದಿಗಾರರ ಜತೆ ಪ್ರತಿಕ್ರಿಯಿಸಿ, ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಗುರುವಂದನಾ ಕಾರ್ಯಕ್ರಮಕ್ಕೆ ಆಹ್ವಾನ ಕೊಡಲು ಬಂದಿದ್ದೆ. ನಾವು ಏಳೂ ಶಾಸಕರು ಒಟ್ಟಾಗಿದ್ದು, ಕಾಂಗ್ರೆಸ್ ತೀರ್ಮಾನದ ಬಗ್ಗೆ ಶೀಘ್ರ ತೀರ್ಮಾನ ಮಾಡ್ತೇವೆ. ದಿಗ್ವಿಜಯ್ ಸಿಂಗ್ ಭೇಟಿ ಮಾಡಿದ ನಮ್ಮ ಸ್ನೇಹಿತರು ಏನುಚರ್ಚೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಯಡಿಯೂರಪ್ಪ ಜತೆಗಿಲ್ಲ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೇರೆ ಪಕ್ಷದ ನಾಯಕರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನಾನ್ಯಾಕೆ ಅವರ ಮಾತಿಗೆ
ಉತ್ತರಿಸಲಿ. ಅವರಿಗೆ ಒಳ್ಳೆಯದಾಗಲಿ ಬಿಡಿ ಎಂದಷ್ಟೇ ಹೇಳಿದರು.