Advertisement
ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಟಿಬೆಟಿಯನ್ ನಿರಾಶ್ರಿತರು ರೈತರಾಗಿ, ವ್ಯಾಪಾರಸ್ಥರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಟಿಬೆಟಿಯನ್ನರು ತಮ್ಮ ಸಂಸ್ಕೃತಿ, ಸಂಪ್ರದಾಯ, ಆಚಾರ-ವಿಚಾರ ಹಾಗೂ ಧಾರ್ಮಿಕತೆಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಜತೆಗಿದ್ದರು.