ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ಸಿಎಂ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಸಿಎಂ ನ.12ರ ಸಂಜೆ ಬೀದರಗೆ ಆಗಮಿಸಿ ರಾತ್ರಿ ನಗರದಲ್ಲಿಯೇ ವಾಸ್ತವ್ಯ ಮಾಡುವರು. 13ರಂದು ಬಸವಕಲ್ಯಾಣ, ಹುಮನಾಬಾದ ಹಾಗೂ ಭಾಲ್ಕಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ವಿವಿಧ ಯೋಜನೆಗಳ ಪ್ರಗತಿಕುರಿತು ಈ ವೇಳೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು
ಶೀಘ್ರ ಪೂರ್ಣಗೊಳಿಸಿ ಉದ್ಘಾಟನೆಗೆ ಅಣಿಗೊಳಿಸಬೇಕು. ಈಗ ಆರಂಭಿಸಬೇಕಾದ ಕಾಮಗಾರಿಗಳ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Related Articles
Advertisement
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು.ಕ್ರಿಯಾ ಯೋಜನೆಯಂತೆ ಸರ್ಕಾರದಿಂದ ಬಿಡುಗಡೆಯಾಗಿರುವ ಸಂಪೂರ್ಣ ಹಣ ಖರ್ಚಾಗುವಂತೆ ನೋಡಿಕೊಳ್ಳಬೇಕು. ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಎಚ್ಚರ ವಹಿಸಬೇಕು. ಮುಖ್ಯಮಂತ್ರಿ ಅವರ ಕಾರ್ಯಕ್ರಮದಲ್ಲಿ ಈ ಬಾರಿ ವಿವಿಧ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತಿದೆ. ಸಾಲಮನ್ನಾ ಯೋಜನೆ, ವಸತಿ ಯೋಜನೆ, ಮೈತ್ರಿ, ಮನಸ್ವಿನಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗೆ ಕೂಡ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು. ಡಿಸಿ ಡಾ| ಎಚ್.ಆರ್.ಮಹಾದೇವ ಮಾತನಾಡಿ, ಸಿಎಂ ಪ್ರವಾಸದ ವೇಳೆ ಸರ್ಕಾರದ ಜನಪರ ಕಾರ್ಯಕ್ರಮ ಸಾಧನೆ ಬಿಂಬಿಸುವ ‘ನುಡಿದಂತೆ ನಡೆದಿದ್ದೇವೆ ಸಾಧನಾ ಸಂಭ್ರಮ’ ಎಂಬ ಪುಸ್ತಕವನ್ನು ಜಿಲ್ಲಾಡಳಿತದಿಂದ ಹೊರತರಲು ಉದ್ದೇಶಿಸಲಾಗಿದೆ. 2013-14ನೇ ಸಾಲಿನಿಂದ ನವೆಂಬರ್ 2017ರವರೆಗೆ ಆಯಾ ಇಲಾಖೆಗಳು ಸಾಧಿಸಿದ ಪ್ರಗತಿ ಮಾಹಿತಿಯನ್ನು ಆಯಾ ಇಲಾಖೆಗಳ ಅಧಿಕಾರಿಗಳು ಶೀಘ್ರ ಸಲ್ಲಿಸಬೇಕು ಎಂದು ಹೇಳಿದರು. ಎಂಎಲ್‌ಸಿ ವಿಜಯಸಿಂಗ್, ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಉಪಾಧ್ಯಕ್ಷ ಪ್ರಕಾಶ ಪಾಟೀಲ, ಸಿಇಒ ಡಾ| ಸೆಲ್ವಮಣಿ, ಎಸ್‌ಪಿ ಡಿ. ದೇವರಾಜ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.