ಹೊಳೆನರಸೀಪುರ: ತಾಲೂಕಿನಲ್ಲಿಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ತೆರಳಿ ತಪಾಸಣೆಗೆ ಮುಂದಾಗಿದ್ದಾರೆ.
ತಾಲೂಕಿನಲ್ಲಿ ಇದುವರೆಗೆ1161 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 926 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ. ಪ್ರಸ್ತುತ 198 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ವರೆಗೆ27 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪಟ್ಟಣದ ಗಾಂಧಿ ನಗರಕ್ಕೆ ತೆರಳಿ ಶೀತ ನೆಗಡಿ,ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರನ್ನು ಪತ್ತೆ ಮಾಡಿ, ಗಂಟಲು ದ್ರವ ಪರೀಕ್ಷೆಗೆ ಮುಂದಾಗಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಕೋವಿಡ್ ತಡೆಗಟ್ಟಲು ಆರೋಗ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಿಬ್ಬಂದಿ ಮನೆಗೆ ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ತಾಲೂಕು ಆರೋಗ್ಯ ಕಿರಿಯ ಸಹಾಯಕ ಜೆ.ಟಿ.ಸ್ವಾಮಿ ಇದ್ದರು. ಇದೇವೇಳೆ ಪಟ್ಟಣದಲ್ಲಿಕರ್ಣಾಟಕ ಬ್ಯಾಂಕ್‌ನ ಶಾಖೆಯ ಸಿಬ್ಬಂದಿಗೆಕೊರೊನಾ ಪಾಸಿಟಿವ್ ಬಂದಿದ್ದರಿಂದ ಸೋಮವಾರ ತನ್ನ ವಹಿವಾಟು ಸ್ಥಗಿತಗೊಳಿಸಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೇಷನ್ ಮಾಡಲಾಯಿತು. ಇಂದು ಸಾರ್ವಜನಿಕರಿಗೆ ಪ್ರವೇಶ ಇಲ್ಲ ಇರುವುದಿಲ್ಲ.
ತಾಲೂಕಿನಲ್ಲಿ 2000ಕ್ಕೇರಿದ ಕೋವಿಡ್ ಪ್ರಕರಣ :
ಅರಸೀಕೆರೆ: ಹಾಸನ ಜಿಲ್ಲೆಯಲ್ಲಿ ಸೋಮವಾರ 327 ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, ಅದರಲ್ಲಿ ತಾಲೂಕಿನ39 ಮಂದಿಯಲ್ಲಿ ಪತ್ತೆ ಆಗಿದೆ. ಈ ಮೂಲಕ ಪಾಸಿಟಿವ್ ಸಂಖ್ಯೆ2 ಸಾವಿರಕ್ಕೇರಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಇಬ್ಬರುಕೊರೊನಾದಿಂದ ಮೃತ ಪಟ್ಟಿದ್ದು, ಈವರೆಗೆ ಒಟ್ಟು57 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ28 ಮಂದಿ ಗುಣಮುಖರಾಗಿದ್ದು, ಇದುವರೆಗೂ1636 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸಕ್ರಿಯ ಪ್ರಕರಣ 307 ಇದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಇಲಾಖೆ ತಿಳಿಸಿದೆ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ :https://t.me/udayavaniweb