Advertisement

ಕೆಮುಂಡೇಲು ಅನುದಾನಿತ ಪ್ರಾಥಮಿಕ ಶಾಲೆಗೆ ಜಪಾನ್ ನಿಯೋಗದ ಭೇಟಿ

07:55 PM Jan 19, 2024 | Team Udayavani |

ಉಡುಪಿ: ಶ್ರೀ ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ, ಜಪಾನ್ ನ ರೆವ್ ಕೋಶೋ ನಿವಾನೋ ಮತ್ತು ಅವರ 7 ಸದಸ್ಯರ ನಿಯೋಗ ಈ ದಿನ, ಎಲ್ಲೂರು ಸಮೀಪದ ಕೆಮುಂಡೇಲು ಅನುದಾನಿತ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸಿದರು.

Advertisement

ಜಪಾನಿನ ರಿಷ್ಯೋ ಕೊಸೈ ಕಾಯ್’ಎಂಬ ಸಂಸ್ಥೆಯ ನಿಯೋಜಿತ ಮಹಾ ಅಧ್ಯಕ್ಷೆ ಆಗಿರುವ ರೆವ್ ಕೋಶೋ ನಿವಾನೋ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಮ್ಮನ್ನು ಪರ್ಯಾಯ ಮಹೋತ್ಸವಕ್ಕೆ ಆಹ್ವಾನಿಸಿದ ಪುತ್ತಿಗೆ ಶ್ರೀಗಳಿಗೆ ವಂದನೆಗಳನ್ನು ಸಲ್ಲಿಸಿ, ಮಕ್ಕಳಿಗೆ “ಶಿಸ್ತು ಮತ್ತು ಸೇವೆ ಜೀವನದ ಅವಿಭಾಜ್ಯ ಅಂಗವಾಗಿರಬೇಕು” ಎಂಬ ಕಿವಿಮಾತುಗಳನ್ನು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಜಗನ್ನಾಥ ಶೆಟ್ಟಿಯವರು ಮತ್ತು ಅಧ್ಯಾಪಕ ಚಂದ್ರಹಾಸ ಪ್ರಭು ಅವರು ಶಾಲೆಯ ವೈಶಿಷ್ಟ್ಯತೆಯನ್ನು ವಿವರಿಸಿದರು.

ಮೂರು ದಿನಗಳ ಮಟ್ಟಿಗೆ ಪರ್ಯಾಯ ಮಹೋತ್ಸವಕ್ಕೆ ಆಗಮಿಸಿದ ಜಪಾನ್ ದೇಶದ ನಿಯೋಗದ ಭೇಟಿಯ ಉಸ್ತುವಾರಿ ವಹಿಸಿರುವ ಅಮೆರಿಕದ ವಿಜ್ಞಾನಿ, ಡಾ. ಎ. ಕೇಶವರಾಜ್ ಅವರು ರೆವ್ ಕೋಶೋ ನಿವಾನೋ ಅವರನ್ನು ಪರಿಚಯಿಸಿದರು.

Advertisement

ಶಾಲೆಯ ಪುಟ್ಟ ವಿದ್ಯಾರ್ಥಿಗಳು ಭಗವದ್ಗೀತೆಯ ಕೆಲವು ಶ್ಲೋಕಗಳನ್ನು ಸುಶ್ರಾವ್ಯವಾಗಿ ಹಾಡಿದಾಗ, ಜಪಾನಿನ ಗಣ್ಯರೆಲ್ಲ, ನೆಲದ ಮೇಲೆಯೇ ಕುಳಿತು ಪ್ರಾರ್ಥಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next