ಯಾದಗಿರಿ : ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗಿದೆ ಎಂಬುದನ್ನು ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳಿಂದ ವರದಿ ತರಿಸಿಕೊಳ್ಳದೇ ಖುದ್ದಾಗಿ ಜಿಲ್ಲಾಮಟ್ಟದ ಅ ಧಿಕಾರಿಗಳೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ತಿಳಿದುಕೊಂಡು ಬಗೆಹರಿಸಲು ಮುಂದಾಗಬೇಕೆಂದು ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಹೆಚ್ಚು ತಾಪಮಾನ ಹೊಂದಿರುವ ಯಾದಗಿರಿ ಜಿಲ್ಲೆಯಲ್ಲಿ ಈ ಬಾರಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿ, ಜಿಲ್ಲೆಯಲ್ಲಿ ಬಹುತೇಕ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಕೇವಲ ಸಿಂಟೆಕ್ಸ್ ಅಳವಡಿಸಲಾಗಿದೆ.
ಪೈಪ್‌ಲೈನ್ ಸಂಪರ್ಕ ಇಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಶಿಲ್ಪಾ ಶರ್ಮಾ, ಈ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗ ಎಲ್ಲ ಅಂಗನವಾಡಿ ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ನೀರು ಸಿಗುವಂತಾಗಬೇಕು. ನೀರು ಪೂರೈಸುತ್ತಿರುವ ಬಗ್ಗೆ ಸ್ಥಳದ ಛಾಯಾಚಿತ್ರ ತೆಗೆದು ಕಳುಹಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅ ಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯ ಸಾಧನೆ ಇಳಿಮುಖವಾಗಿದ್ದು, ಇದರ ಕುರಿತು ಕಟುನಿಟ್ಟಿನ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಬೆಳಗ್ಗೆ ವಿಜ್ಞಾನ, ಗಣಿತ ಹಾಗೂ ಇಂಗ್ಲಿಷ್ ವಿಷಯಗಳ ಬೋಧನೆ ಮಾಡಬೇಕು.
ಎಸ್ಸೆಸ್ಸೆಲ್ಸಿ ತರಗತಿಗಳಿಗೆ ಬೋ ಧಿಸುವ ಶಿಕ್ಷಕರು ಆಡಳಿತಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೋಧನೆ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಅಧ್ಯಕ್ಷರು ಸಲಹೆ ನೀಡಿದರು. ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಅಮರದೀಪ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಪಂ ಅಧ್ಯಕ್ಷರು ಮಾ.8ರಂದು ವಿವಿಧ ಇಲಾಖೆಯಿಂದ ಆಯೋಜಿಸಿದ್ದ ಫಲ-ಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಮೇಳದ ಕುರಿತು ಅ ಧಿಕಾರಿಗಳಿಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಗಿರಿಜಮ್ಮಗೌಡ ರೋಟ್ನಡಗಿ, ಜಿಪಂ ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಎಸ್, ಜಿಪಂ ಮುಖ್ಯ ಯೋಜನಾ ಧಿಕಾರಿ ಸುನೀಲ್ ಬಿಸ್ವಾಸ್ ಸೇರಿದಂತೆ ಇತರರು ಇದ್ದರು.