Advertisement

ಕೃಷಿ ಪರಿಕರ ಮಳಿಗೆಗಳಿಗೆ ಭೇಟಿ-ಪರಿಶೀಲನೆ

05:51 PM Apr 29, 2020 | Suhan S |

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕಿನಲ್ಲಿನ ಎಲ್ಲ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಜಾರಿ ದಳದ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲ ನೇತೃತ್ವದಲ್ಲಿ ಕಳೆದ 2 ದಿನಗಳಿಂದ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಈ ವೇಳೆ ಅಧಿಕಾರಿ ಸಂತೋಷ ಪಟ್ಟದಕಲ್ಲ ಮಾತನಾಡಿ, ಪ್ರಸಕ್ತ 2020-21ನೇ ಸಾಲಿನಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿದೆ. ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಪ್ರಮಾಣಿಕರಿಸಿದ ಬೀಜಗಳನ್ನು ಮಾತ್ರ ಮಾರಾಟ ಮಾಡಬೇಕು. ಪ್ರತಿಯೊಂದು ಪರಿಕರಗಳ ನಿಖರ ಬೆಲೆಯನ್ನು ಸೂಚನಾ ಫಲಕದಲ್ಲಿ ನಮೂದಿಸಬೇಕು. ಕಂಪನಿಯು ನಿರ್ದಿಷ್ಟಪಡಿಸಿದ ದರದಲ್ಲಿ ಕೃಷಿ ಸಾಮಗ್ರಿಗಳನ್ನು ಮಾರಾಟ ಮಾಡಬೇಕು ಎಂದು ಸೂಚಿಸಿದರು.

ಕೆಲ ವ್ಯಾಪಾರಸ್ಥರು ನಕಲಿ ಹಾಗೂ ಗುಣಮಟ್ಟವಲ್ಲದ ಬೀಜಗಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿವೆ. ಯಾರಾದರೂ ಪರವಾನಗಿ ಇಲ್ಲದೆ ಅಕ್ರಮವಾಗಿ ಬೀಜ ದಾಸ್ತಾನು ಮಾಡುವುದು ಹಾಗೂ ದೃಢೀಕೃತವಲ್ಲದ ಬೀಜಗಳನ್ನು ದಾಸ್ತಾನು ಮಾಡಿ ರೈತರಿಗೆ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಗೌಡ ನರಸಮ್ಮನವರ, ರೈತ ಸಂಪರ್ಕ ಕೇಂದ್ರ ಶಿರಹಟ್ಟಿಯ ಕೃಷಿ ಅಧಿ ಕಾರಿ ಕೆ.ಎ. ನದಾಫ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next