Advertisement
ವ್ಯಕ್ತಿಯೊಬ್ಬರು ರಸ್ತೆ ನಿರ್ಮಿಸಿದ ಪರಿಣಾಮ ಇಲ್ಲಿನ ಸೋಮೇಶ್ವರ ಗುಡ್ಡದಿಂದ ಅಪಾರ ಪ್ರಮಾಣದ ಮಣ್ಣು ರಸ್ತೆಗೆ ಬೀಳುತ್ತಿದೆ. ಈ ಮಣ್ಣು ಚರಂಡಿ ಹಾಗೂ ಸೋಮೇಶ್ವರ ದೊಂಬೆ ರಸ್ತೆಗೆ ನೀರಿನೊಂದಿಗೆ ಸಾಗುತ್ತಿದ್ದು, ಯಾವುದೇ ಕ್ಷಣದಲ್ಲೂ ಇಲಿಲ ಕುಸಿತವಾಗುವ ಸಾಧ್ಯತೆ ಇದೆ. ಒಂದೊಮ್ಮೆ ಕುಸಿದರೆ ಬಾರಿ ಅಪಾಯ ಉಂಟಾಗುವ ಸಾದ್ಯತೆ ಇದೆ.
ಜನಸಾಮಾನ್ಯರಿಗೆ ಒಂದು ಸಣ್ಣ ಮನೆ ಕಟ್ಟಲು ನೂರು ದಾಖಲೆ ಕೇಳುವ ಅಧಿಕಾರಿಗಳು ಗುಡ್ಡ ಕೊರೆದು ರಸ್ತೆ ನಿರ್ಮಿಸಲು ಹೇಗೆ ಅನುಮತಿ ಹೇಗೆ ನೀಡಿದರು? ಮುಖ್ಯ ರಸ್ತೆಯಿಂದ ಕನಿಷ್ಠ 8 ಮೀಟರ್ ಅಂತರ ಇರಬೇಕೆಂಬ ನಿಯಮ ಇದೆ. ಆದರೆ ಈ ರಸ್ತೆ ನಿರ್ಮಾಣಕ್ಕೆ 3 ಮೀಟರ್ ಕೂಡ ಅಂತರ ಇಲ್ಲ. ಹಣವಂತರಿಗೊಂದು, ಜನಸಾಮಾನ್ಯರಿಗೆ ಇನ್ನೊಂದು ನ್ಯಾಯವೇ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Related Articles
ಗುಡ್ಡ ಕುಸಿಯುತ್ತಿರುವ ಮಾಹಿತಿ ತಿಳಿದು ಕಂದಾಯ ಇಲಾಖೆ, ಪೊಲೀಸ್ ಸಹಿತ ಇತರ ಅಧಿಕಾರಿಗಳು ಸ್ಥಳಕ್ಕಾಮಿಸಿದರು. ಕುಸಿಯುವ ಭೀತಿ ಇರುವುದರಿಂದ ದೊಂಬೆ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲು ಮುಂದಾದ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಈಗ ಮುಖ್ಯರಸ್ತೆ ಮುಚ್ಚಿದರೆ ಸಾರ್ವಜನಿಕರು ನಿತ್ಯ ಸುತ್ತು ಬಳಸಿ ಬರಲು ಸಾಧ್ಯವಿಲ್ಲ. ಮೊದಲು ಗುಡ್ಡ ಕೊರೆದವರ ಮೇಲೆ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಸ್ಥಳೀಯರನ್ನು ಸಮಾಧಾನಪಡಿಸಿದ ಬಳಿಕ ಬ್ಯಾರಿಕೇಡ್ ಹಾಗೂ ಎಚ್ಚರಿಕೆ ಫಲಕ ಅಳವಡಿಸಿ ದೊಂಬೆ ರಸ್ತೆಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ.
Advertisement
ಪ್ರಕರಣ ದಾಖಲಿಸುತ್ತೇವೆಈ ಕುರಿತು ಪ್ರತಿಕ್ರಿಯಿಸಿದ ಪ.ಪಂ. ಅಧಿಕಾರಿ ಅಜಯ್ ಭಂಡಾರ್‌ಕರ್ ಅವರು, ಈ ಬಗ್ಗೆ ಪರಿಶೀಲಿಸಿ, ಯಾರಿಂದಾದರೂ ತಪ್ಪಾಗಿದ್ದರೆ ಪ್ರಕರಣ ದಾಖಲಿಸಿಕೊಂಡು ಅನುಮತಿ ರದ್ದುಪಡಿಸುವುದಾಗಿ ತಿಳಿಸಿದರು. ಸ್ಥಳಕ್ಕೆ ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ಕಂದಾಯ ಇಲಾಖೆಯ ಪ್ರಥಮ ದರ್ಜೆ ನಿರೀಕ್ಷಕ ದೀಪಕ್, ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಹರ್ಷ ವಿ., ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್, ಕಿರಿಯ ಆರೋಗ್ಯ ನಿರೀಕ್ಷಕ ಸತೀಶ್ ಆರ್.ಚಂದನ್, ಗಸ್ತು ಅರಣ್ಯ ಪಾಲಕರಾದ ಶಂಕರ ಡಿ.ಎಲ್., ಮಂಜುನಾಥ ನಾಯ್ಕ ಮೊದಲಾದವರು ಭೇಟಿ ನೀಡಿದರು. ಗುಡ್ಡ ಕುಸಿದರೆ ಅಧಿಕಾರಿಗಳೇ ಹೊಣೆ: ಗಂಟಿಹೊಳೆ
ಉಪ್ಪುಂದ: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್‌ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅದಕ್ಕೆ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ತತ್‌ಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದ್ದಾರೆ.