Advertisement

ಜಲನಗರ ಸರ್ಕಾರಿ ಪ್ರೌಢಶಾಲೆಗೆ ಅಪರ ಆಯುಕ್ತ ಬಿರಾದಾರ ಭೇಟಿ

05:17 PM Jan 15, 2022 | Shwetha M |

ವಿಜಯಪುರ: ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳ್ಳಲು ಶಿಕ್ಷಕರು, ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಎಸ್‌. ಎಸ್‌. ಬಿರಾದಾರ ಕರೆ ನೀಡಿದರು.

Advertisement

ವಿಜಯಪುರ ನಗರದ ಜಲನಗರದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗವಾಗಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಊಟ ನೀಡಬೇಕು. ವಿಜಯಪುರ ಜಿಲ್ಲೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಳಿಸಲು ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನು ನಿರ್ಮಿಸಲು ಸಹಕಾರಿಯಾಗಬೇಕು. ಜಿಲ್ಲೆ ಶೈಕ್ಷಣಿಕ ಪ್ರಗತಿಯಲ್ಲಿ ಮುಂದೆ ಬರಲು ಪ್ರತಿಯೊಬ್ಬ ಶಿಕ್ಷಕರು, ಶಿಕ್ಷಣ ಕೇತ್ರದ ಅಧಿಕಾರಿಗಳು ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಲನಗರ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಗುಣಮಟ್ಟ ಪರೀಕ್ಷೆಗಾಗಿ ತರಗತಿ ಪರಿಶೀಲನೆ ನಡೆಸಿದರು.

ಆಯುಕ್ತರ ಜೊತೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್‌.ವಿ. ಹೊಸೂರ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮೋರಟಗಿ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್‌. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ಕೆ. ಬಿರಾದಾರ, ಪ್ರೌಢಶಾಲಾ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎ.ಕೆ. ಬಾಗವಾನ, ಸಿಆರ್‌ಪಿ ಎಸ್‌. ಎಂ. ಬಿರಾದಾರ, ಪ್ರೌಢಶಾಲೆ ಮುಖ್ಯಾಧ್ಯಾಪಕ ಎ.ಆರ್‌. ದಶವಂತ ಎಸ್‌.ಆರ್‌. ಹಜೇರಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next