Advertisement
ದೇಗುಲದಲ್ಲಿ ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡ ಅವರು ಬಳಿಕ ಸನ್ನಿಧಿಯಲ್ಲಿ ಧ್ಯಾನಮಗ್ನರಾದರು. ಭೇಟಿ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ , ಉಪಕಮಿಷನರ್ ಶಿಲ್ಪಾ ನಾಗ್, ಕೊಲ್ಲೂರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್, ಉಪ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ, ಸಮಿತಿಯ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ತಂತ್ರಿ ಹಾಗೂ ಸಮಿತಿ ಸದಸ್ಯ ಮಂಜುನಾಥ ಅಡಿಗ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ ಮುಂತಾದವರು ಉಪಸ್ಥಿತ ರಿದ್ದರು. ದೇಗುಲದ ಅರ್ಚಕರಾದ ಡಾ| ಕೆ.ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ.ಎನ್. ಗೋವಿಂದ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇಗುಲ ಸಮಿತಿಯವರು ರಾಜೇ, ದುಷ್ಯಂತ ಅವರನ್ನು ಗೌರವಿಸಿದರು.
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆಅವರು ಮಂಗಳವಾರ ಕೊಲ್ಲೂರಿಗೆ ಆಗಮಿಸಿ ಶತಚಂಡಿ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳುವರು. ಪ್ರಧಾನಿ ಸಿಂಘೆ ಅವರ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಅಪರಾಹ್ನ 3ರ ವರೆಗೆ ದೇಗುಲ ದಲ್ಲಿ ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಭದ್ರತೆ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಶ್ರೀಲಂಕಾ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿಶೇಷ ಭದ್ರತಾ ಪಡೆಗಳು ಕೊಲ್ಲೂರಿಗೆ ಆಗಮಿ ಸಿದ್ದು ಅರೆಶಿರೂರಿನ ಹೆಲಿ ಪ್ಯಾಡ್ ಸಮೇತ ವಿವಿಧ ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಿವೆ. ಈ ಹಿಂದೆಯೇ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಅವರು ಆಗಮಿಸಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದ ಕಾರ್ಯಕ್ರಮ ರದ್ದುಗೊಂಡಿತ್ತು.