Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಷ್ಟದಲ್ಲಿದ್ದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಸಹಿತ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆ ಮುಚ್ಚದಂತೆ ಮನವಿ ಮಾಡಲಾಗಿತ್ತು. ತಾನೂ ಕೇಂದ್ರದ ಮೇಲೆ ಒತ್ತಡ ಹೇರಿದ್ದು, ಕಾರ್ಖಾನೆಯನ್ನು ಮುಚ್ಚಿದರೆ ಸುಮಾರು 10 ಸಾವಿರ ಜನರು ಉದ್ಯೋಗ ಕಳೆದುಕೊಳ್ಳುತ್ತಾರೆ. ಆದ್ದರಿಂದ ಮುಚ್ಚಬಾರದು ಎಂದು ಮನವಿ ಮಾಡಿದ್ದೆ. ಹೀಗಾಗಿ ಕೇಂದ್ರ ಸರಕಾರ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದಿದೆ. ಬೀಸುವ ದೊಣ್ಣೆಯಿಂದ ನಾವು ಪಾರಾಗಿದ್ದೇವೆ ಎಂದು ಹೇಳಿದರು.
ಕೇಂದ್ರ ಸರಕಾರ ಕಾರ್ಖಾನೆ ಮುಚ್ಚದಿರುವ ಬಗ್ಗೆ ಮತ್ತು ಸೈಲ್ ಮುಂದುವರಿಸಿಕೊಂಡು ಹೋಗುವ ಬಗ್ಗೆ ಮೌಖಿಕವಾಗಿ ಒಪ್ಪಿಗೆ ನೀಡಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಲಿಖೀತವಾಗಿ ತಿಳಿಸಲು ಆಗುತ್ತಿಲ್ಲ. ಆದರೆ ಬಿಜೆಪಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದರು.