Advertisement

Vitla ; ಬಜರಂಗದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ

05:22 PM May 24, 2023 | Team Udayavani |

ವಿಟ್ಲ: ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದ ಘಟನೆ ಬುಧವಾರ ನಡೆದಿದೆ.

Advertisement

ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಸಾಮಾಜಿಕ ತಾಣಗಳಲ್ಲಿ ಮತ್ತು ಕೆಲ ಮಾಧ್ಯಮಗಳಲ್ಲಿ ತಲವಾರು ದಾಳಿ ಎಂದು ಸುದ್ದಿ ಪ್ರಕಟವಾಗಿದ್ದು, ಇದು ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ರೀತಿ ಕಾಂಗ್ರೆಸ್ ಸರಕಾರ ರಚನೆ ಸಂದರ್ಭದಲ್ಲಿ ಕೂಡಾ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಗಿತ್ತು. ಒಟ್ಟಿನಲ್ಲಿ ವಿಜಯೋತ್ಸವದ ವಿಚಾರದಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ಪರಿಶೀಲಿಸುತ್ತಿದೆ. ಇನ್ನಷ್ಟು ಮಾಹಿತಿ ಬರಬೇಕಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next