Advertisement

Vitla: ಭಾರೀ ಗಾಳಿ-ಮಳೆಗೆ ಕೋಳಿ ಸಾಕಣೆಯ ಶೆಡ್ ಕುಸಿದು ಬಿದ್ದು ಸಾವಿರಾರು ರೂ. ನಷ್ಟ

02:27 PM Jul 19, 2024 | Team Udayavani |

ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಮಾಡುವ ಶೆಡ್ ಕುಸಿದು ಬಿದ್ದು ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ. ಜು.18ರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

Advertisement

ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಕೋಳಿಗಳು ದೊಡ್ಡದಾಗಿರುವ ಹಿನ್ನೆಲೆ ಸುಮಾರು 700 ಕೋಳಿಗಳು ಮಾರಾಟವಾಗಿದ್ದವು.

ಶೆಡ್ಡಿನ ಮೇಲ್ಛಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ.

ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆಯೆನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next