Advertisement

ವಿಟ್ಲ: ಒಂಟಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ

08:53 PM Oct 11, 2020 | sudhir |

ವಿಟ್ಲ : ವಿಟ್ಲ ಮೇಗಿನಪೇಟೆಯಲ್ಲಿ ಒಂಟಿಯಾಗಿ ವಾಸವಿದ್ದ ಮಹಿಳೆಯ ಮನೆಗೆ ದಾಳಿ ಹಾಗೂ ಹಲ್ಲೆ ನಡೆಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮದ್ ಬಂಧಿತ ಆರೋಪಿ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಹಾಗೂ ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ವಿಟ್ಲ ಪಿಎಸ್ಐ ವಿನೋದ್ ರೆಡ್ಡಿ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯಲ್ಲಿನ ಮರದ ಪೀಠೋಪಕರಣ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಮೂರು ದಿನಗಳಿಂದ ಆತ ಮಹಿಳೆಯ ಮನೆಯ ಸುತ್ತ ಅನುಮಾನಾಸ್ಪದ ರೀತಿಯಲ್ಲಿ ಓಡಾಡಿ ದಾಳಿಗೆ ಸಿದ್ಧತೆ ನಡೆಸಿದ್ದ ಎಂಬುದು ಪೊಲೀಸ್ ತನಿಖೆಯ ವೇಳೆ ತಿಳಿದುಬಂದಿದ್ದು, ಇದೇ ಮಾಹಿತಿಯ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಸಂಪುಟದಲ್ಲಿ ಮಹತ್ವದ ಬದಲಾವಣೆ : ಶ್ರೀರಾಮುಲು ಕೈಯಲ್ಲಿದ್ದ ಅರೋಗ್ಯ ಖಾತೆ ಸುಧಾಕರ್ ಹೆಗಲಿಗೆ?

ಪೊಲೀಸರು ಆರೋಪಿಯ ಜತೆಗೆ ಆತ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಹಣದ ಅಭಾವದಿಂದ ಆತ ಈ ಕೃತ್ಯ ನಡೆಸಿದ್ದಾನೆ ಎಂಬುದು ತಿಳಿದುಬಂದಿದೆ.

Advertisement

ಘಟನೆಯ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ವಿಟ್ಲ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು. ಪೊಲೀಸ್ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬಂದಿ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next