Advertisement

ವಿಟ್ಲ: ಮಹಿಳೆ ಜತೆ ಅಸಭ್ಯ ವರ್ತನೆ: ಆರೋಪಿಯ ಬಂಧನ

10:22 PM May 17, 2023 | Team Udayavani |

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಬಂಧಿತ ಆರೋಪಿ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.

Advertisement

ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿ ಕೆ. ಅಬೂಬಕ್ಕರ್‌ (46)ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಎಚ್‌.ಈ. ಅವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್‌ ಉಪ ನಿರೀಕ್ಷಕ‌ ಕಾರ್ತಿಕ್‌ ಕಾತರಕಿ ಹಾಗೂ ಪೊಲೀಸರಾದ ಎಚ್‌.ಸಿ. ರಕ್ಷಿತ್‌ ಮತ್ತು ಪಿ.ಸಿ. ಹೇಮರಾಜ ಅವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next