Advertisement

ವಿಟ್ಲ: ಬೆಂಕಿಗಾಹುತಿಯಾದ ಲಾರಿ; ಅಪಾರ ನಷ್ಟ

02:06 PM Feb 21, 2023 | Team Udayavani |

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

Advertisement

ಪೆಟ್ರೋಲ್ ಬಂಕ್ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿದ್ದಾರೆ.

5 ತಿಂಗಳ ಹಿಂದೆ ಈ ಲಾರಿಯನ್ನು ಖರೀದಿಸಿದ್ದಲ್ಲದೇ ಸೋಮವಾರ ಶೋರೂಮಿನಲ್ಲಿ ಸರ್ವೀಸ್ ನಡೆಸಿ ಬಂದಿರುವುದಾಗಿ ತಿಳಿದು ಬಂದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next