ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ.
ಘಟನೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರು ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.