Advertisement

Vitla: ಮಹಿಳೆಗೆ ಚಾಕು ತೋರಿಸಿ ಚಿನ್ನ ಲಪಟಾಯಿಸಲು ಯತ್ನ

11:46 AM Nov 26, 2023 | Team Udayavani |

ವಿಟ್ಲ: ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

Advertisement

ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ. ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾದ್ದಾನೆ.

ಬಳಿಕ 112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್‌ ತಂಡ ಸ್ಥಳಕ್ಕೆ ಆಗಮಿಸಿದರು. ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು. ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next