Advertisement

ವಿಟ್ಲ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ; ಆಟೋ ಚಾಲಕನ ಬಂಧನ

10:50 AM Feb 01, 2022 | Team Udayavani |

ವಿಟ್ಲ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

Advertisement

ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಬಂಧಿತ ಆರೋಪಿ.

ಪರಿಚಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ. ಆಕೆಯ ಮನೆಗೆ ಆಗಾಗ ಬರುತ್ತಿದ್ದ.  ಮನೆಗೆ ಬಾರದಂತೆಯೂ ಆತನಿಗೆ ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ.

ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ನೀಡಿದ‌ ದೂರಿನಲ್ಲಿ ವಿವರಿಸಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next