ವಿಟ್ಲ: ಜಗಳ ಮಾಡಿ ಪತಿ ಪತ್ನಿಯನ್ನು ದೂಡಿ ಹಾಕಿ, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ಪುಣಚದಲ್ಲಿ ಡಿ.14ರ ಗುರುವಾರ ನಡೆದಿದೆ.
ದೇವಿನಗರ ನಿವಾಸಿ ಲೀಲಾ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಂಜೀವ, ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎಂಬ ಮಾಹಿತಿ ಸ್ಥಳೀಯರಿಂದ ತಿಳಿದು ಬಂದಿದೆ.
ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದರು. ಡಿ.12ರ ಗುರುವಾರ ಲೀಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪೊಲೀಸರು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಮೊದಲಿಗೆ ಈ ಪ್ರಕರಣ ಸಹಜ ಸಾವಿನಂತಿದ್ದರೂ ಬಳಿಕ ಪೊಲೀಸ್ ತನಿಖೆಯಿಂದ ಇದು ಕೊಲೆ ಎಂದು ಹೇಳಲಾಗಿದೆ. ಆರೋಪಿ ಸಂಜೀವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.