ವಿಟ್ಲ: ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣ ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ವಿಟ್ಲದ ಕನ್ಯಾನದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಕಳೆಂಜಿಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣ ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದು, ಕನ್ಯಾನ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಕುಡಿಯಲು ಯತ್ನಿಸಿದಾಗ ಕೋಣ ಟ್ಯಾಂಕ್ ಗೆ ಜಾರಿ ಬಿದ್ದಿದೆ.
ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್; ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಪಟ್ಟಿ ಬಹುತೇಕ ಅಂತಿಮ
ಸ್ಥಳಕ್ಕೆ ವಿಟ್ಲ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಟ್ಯಾಂಕ್ ನಿಂದ ನೀರು ಖಾಲಿ ಮಾಡಲಾಗುತ್ತಿದ್ದು, ಅದರ ಮೂಲಕ ಕೋಣವನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಟ್ಯಾಂಕ್ 5 ಅಡಿ ಆಳವಿದ್ದು, ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬಂದಿಗಳು ತಿಳಿಸಿದ್ದಾರೆ.