Advertisement

ಪಿಕಪ್ ಚಾಲಕನ ಅಜಾಗರೂಕತೆ: ಸ್ಕೂಟರ್ ಗೆ ಢಿಕ್ಕಿಯಾಗಿ ಓರ್ವ ಸಾವು!

07:40 AM Apr 14, 2021 | Team Udayavani |

ವಿಟ್ಲ: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

Advertisement

ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್‌ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್‌ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್‌ಅಪ್‌ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.

ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next