ವಿಟ್ಲ: ಇಬ್ಬರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಅಶ್ಲೀಲ ಫೋಟೋಗಳನ್ನು ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿದ ಘಟನೆ ಬೋಳಂತೂರು ಗ್ರಾಮದಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೋಳಂತೂರು ಗ್ರಾಮದ ಅಬೂಬಕ್ಕರ್ ಸಿದ್ದಿಕ್ ಹಾಗೂ ಚಪ್ಪಿ ಆರೋಪಿಗಳು.
ಬೋಳಂತೂರು ಗ್ರಾಮದ ಅಪ್ರಾಪ್ತ ಬಾಲಕಿಯ ಜತೆ ನೆರೆಮನೆಯ ಆರೋಪಿ ಅಬೂಬಕ್ಕರ್ ಸಿದ್ದಿಕ್ ಆತನ ಸ್ನೇಹಿತ ಚಪ್ಪಿ ಎಂಬವರು ಪೋನ್ ಕರೆ ಮಾಡಿ, ‘ನಿನ್ನೊಂದಿಗೆ ಮಾತನಾಡಬೇಕು, ಮನೆಯ ಹೊರಗೆ ಬಾ’ ಎಂದರು.
ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಮನೆಯ ಅಂಗಳಕ್ಕೆ ಬಾಲಕಿ ಬಂದಾಗ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಬಾಲಕಿಯ ನಗ್ನ ಪೋಟೋಗಳನ್ನು ತೆಗೆದಿದ್ದರು. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ತಮ್ಮ ಮೊಬೈಲ್‌ನಲ್ಲಿರುವ ಬೆತ್ತಲೆ ಪೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದಲ್ಲದೆ ಮತ್ತೆ ಮತ್ತೆ ಪೀಡಿಸುತ್ತಿದ್ದರೆನ್ನಲಾಗಿದೆ.
ಆರೋಪಿತರು ಪದೇ ಪದೇ ಒತ್ತಾಯಪಡಿಸಿದ್ದಾರೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ಮೇಲೆ ಪೋಸ್ಕೋ ಕಾಯಿದೆ ಪ್ರಕಾರ ಪ್ರಕರಣ ದಾಖಲಾಗಿದೆ.