Advertisement

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

08:19 AM Jan 08, 2025 | Team Udayavani |

ವಿಟ್ಲ: ಪಕಳಕುಂಜ ಶ್ಯಾಮ ಭಟ್ಟರು ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಪಕಳಕುಂಜ ಮೂಲದ, ಅಳಿಕೆ ನಿವಾಸಿ, ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಜ.7ರಂದು ನಿಧನ ಹೊಂದಿದರು. ಮೃತರು ಪತ್ನಿ, ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
2007ರ ವರೆಗೆ ಪಕಳಕುಂಜದಲ್ಲಿ ವಾಸ್ತವ್ಯವಿದ್ದ ಶ್ಯಾಮ ಭಟ್ಟರು ಪ್ರಸ್ತುತ ಅಳಿಕೆಯಲ್ಲಿ ನೆಲೆಸಿದ್ದರು.

Advertisement

23-12-1949ರಂದು ನಾರಾಯಣ ಭಟ್ ಮತ್ತು ಪರಮೇಶ್ವರಿ ಅಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದರು. ತಂದೆಯವರ ಸಂಚಾಲಕತ್ವದ ವೇಣುಗೋಪಾಲ ಹಿರಿಯ ಪ್ರಾಥಮಿಕ ಶಾಲೆ ಪಕಳಕುಂಜ ಇಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ. ಹೈಸ್ಕೂಲು ವಿದ್ಯಾಭ್ಯಾಸವನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ಪೂರೈಸಿದರು. ವಿವೇಕಾನಂದ ಕಾಲೇಜಿನಲ್ಲಿ (ಪುತ್ತೂರು) ವ್ಯಾಸಂಗ ಮಾಡಿ ಬಿ.ಎಸ್ಸಿ. ಪದವಿಯನ್ನು ಪಡೆದ (ಬಯೋಲಜಿ) ಶ್ಯಾಮ ಭಟ್ಟರು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ನಂತರ ಸರಕಾರೀ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಬಿ.ಎಡ್. ಶಿಕ್ಷಣವನ್ನು ಪೂರೈಸಿದರು. ವಿಠಲ ಪದವಿಪೂರ್ವ ಕಾಲೇಜು ವಿಟ್ಲದಲ್ಲಿ 32 ವರ್ಷ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದಾರೆ.

ಅಲ್ಲದೆ ಇವರು ಬರೆದ ಅಪ್ರಕಟಿತವಾದ ಅನೇಕ ಪುಸ್ತಕಗಳಿವೆ. ಉಳಿಯ ಧನ್ವಂತರೀ ಯಕ್ಷಗಾನ ಕಲಾ ಸಂಘದ ವತಿಯಿಂದ ನಡೆದ ತಾಳಮದ್ದಳೆ ಸ್ಪರ್ಧೆಯಲ್ಲಿ ಯಕ್ಷಸಿಂಧೂರ ಪ್ರತಿಷ್ಠಾನ (ರಿ.), ವಿಟ್ಲ ತಂಡಕ್ಕೆ ಪ್ರಥಮ ಪ್ರಶಸ್ತಿ ಬಂದಿತ್ತು. ಆ ತಂಡದ ಸದಸ್ಯನಾಗಿ ಶ್ಯಾಮ ಭಟ್ಟರು ಶ್ರೇಷ್ಠ ಅರ್ಥಧಾರಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದಿದ್ದರು. ಇನ್ನೂ ಹಲವೆಡೆಗಳಲ್ಲಿ ಸಂಘ-ಸಂಸ್ಥೆಗಳಿಂದ ಸಮ್ಮಾನಗಳನ್ನು ಪಡೆದ ಶ್ರೀಯುತರು ಒರಿಸ್ಸಾದಲ್ಲಿ ಕನ್ನಡ ಸಂಘದ ವತಿಯಿಂದ ಸುನಾಬೇಡ ಎಂಬಲ್ಲಿ (1984), ಬೆಂಗಳೂರು, ಮುಂಬಯಿ ಮೊದಲಾದ ಕಡೆಗಳಲ್ಲಿ ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next