ಮಂಗಳೂರು: ಕಾಮಾತುರಾಣಾಂ ನ ಭಯಂ ನ ಲಜ್ಜಾಃ ಎನ್ನುವ ಮಾತಿದೆ. ಅದಕ್ಕೆ ಸಾಕ್ಷಿಯಾಗಿ ಜಿಲ್ಲೆಯ ವಿಟ್ಲ ಪಟ್ಟಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯೊಬ್ಬಳು ಕಾಮಕ್ರೀಡೆಯಲ್ಲಿ ತೊಡಗಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಇತ್ತೀಚೆಗೆ ನಡೆದಿದೆ.
ವಿದ್ಯಾರ್ಥಿಗಳು ಅಸಹ್ಯ ಸ್ಥಿತಿಯಲ್ಲಿ ಇರುವುದನ್ನು ಸಾರ್ವಜನಿಕರು ಗಮನಿಸಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಎದ್ದು ಬಿದ್ದು ಓಟ ಕಿತ್ತಿರುವುದು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವ ವಿಡಿಯೋದಲ್ಲಿ ದಾಖಲಾಗಿದೆ.
ವಿಡಿಯೋ ಇದೀಗ ಜಿಲ್ಲಾದ್ಯಂತ ವೈರಲ್ ಆಗಿದ್ದು ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾದ ಬಗ್ಗೆ ವರದಿಯಾಗಿಲ್ಲ.
Video courtesy :- Public TV