Advertisement

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

01:12 PM May 26, 2024 | Team Udayavani |

ವಿಟ್ಲ: ಬೀಗ ಹಾಕಿದ ವಿದೇಶದಲ್ಲಿರುವವರ ಮನೆಗೆ ನುಗ್ಗಿ ರಾಡೋ ವಾಚ್‌ ಕದ್ದು, ಸಿಸಿ ಟಿವಿ, ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ನಡೆದಿದೆ.

Advertisement

ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು 6 ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ರವಿವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಸಂಶಯಗೊಂಡಿದ್ದರು.

ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ ಸಿ.ಸಿ.ಕ್ಯಾಮರಾದ ದೃಷ್ಟಿ ಬದಲಾಯಿಸಿ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಎ.ಸಿ.ಚಾಲು ಮಾಡಿಯೇ ನಾಲ್ಕು ಕಪಾಟುಗಳನ್ನು ಒಡೆದು ಸೊತ್ತುಗಳಿಗಾಗಿ ಗಂಟೆಗಳ ಕಾಲ ಸಾಕಷ್ಟು ಜಾಲಾಡಿದ್ದಾರೆ.

ಕಪಾಟಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ರಾಡೋ ವಾಚ್ ಮಾತ್ರ ನಾಪತ್ತೆಯಾಗಿದೆ. ಮಾಲಿಕ ಖಲೀಲ್ ಕುಟುಂಬ ವಿದೇಶದಲ್ಲಿರುವ ಕಾರಣ ಅದೃಷ್ಟವಶಾತ್ ಚಿನ್ನಾಭರಣಗಳೆಲ್ಲವೂ ಸುರಕ್ಷಿತವಾಗಿದೆ. ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ ಕಳ್ಳರು ಮರಳಿ ಹೋಗುವ ಸಂದರ್ಭ ಡಿ.ವಿ.ಆರ್. ಹೊತ್ತೊಯ್ದಿದ್ದಾರೆ.

Advertisement

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next