Advertisement
ರವಿವಾರ ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾ„ಕ್ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ, ವಿಟ್ಲಪಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಮಾಣಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಅಭಿಷೇಕ್ ರೈ, ಕನ್ಯಾನ ಬಿಜೆಪಿ ಮುಖಂಡ ಕೆ. ಪಿ.ರಘುರಾಮ ಶೆಟ್ಟಿ ಮತ್ತಿತರರು ಭೇಟಿ ನೀಡಿದರು. ಬಂಟ್ವಾಳ ಶಾಸಕ ರಾಜೇಶ್ ನಾ„ಕ್ ಉಳಿಪ್ಪಾಡಿಗುತ್ತು ಅವರು ಕಾಪುಮಜಲು ರಮೇಶ್ ಮಡಿವಾಳ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾ„ಕ್ ಉಳಿಪ್ಪಾಡಿಗುತ್ತು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು. ಮೃತ ದೇಹಗಳ ಹಸ್ತಾಂತರ:
ಮೃತ ದೇಹವನ್ನು ಮಣ್ಣಿನಿಂದ ಹೊರ ತೆಗೆದು ದೇರಳಕಟ್ಟೆ ಆಸ್ಪತ್ರೆಗೆ ಶನಿವಾರ ವರ್ಗಾಯಿಸಲಾಗಿತ್ತು. ರವಿವಾರ ಬೆಳಗ್ಗೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.