ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನ ನಿವಾಸಿ ಕಬೀರ್ (30) ಬಂಧಿತಆರೋಪಿಗಳು.
ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು.
ತತ್ ಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳರಾಗಿದೆ.
Related Articles
ಸಿಬಂದಿ ಹೇಮರಾಜ್ ಹಾಗೂ ಇಲಾಖಾ ಜೀಪ್ ಚಾಲಕ ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.