ವಿಟ್ಲಪಟ್ನೂರು : ವಿಟ್ಲಪಟ್ನೂರು ವಲಯ ಕಾಂಗ್ರೆಸ್, ಯೂತ್ ಕಾಂಗ್ರೆಸ್ ಹಾಗೂ ಕೊಡಂಗಾಯಿ ಮಾರ್ನಿಂಗ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ಹಾಗೂ ದ.ಕ. ಜಿಲ್ಲೆಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಪ್ರೊ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಕೊಡಂಗಾಯಿಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕಬಡ್ಡಿ ಕ್ರೀಡೆ ಯಲ್ಲಿ ನಮ್ಮ ದೇಶ ಉನ್ನತ ಸ್ಥಾನದಲ್ಲಿದೆ. ದೇಶದ ಕಬಡ್ಡಿ ಆಟವನ್ನು ನೋಡಿ ವಿದೇಶದಲ್ಲಿಯೂ ಕ್ರೀಡೆಗಳು ನಡೆಯುತ್ತಿವೆ. ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕ್ರೀಡಾಂಗಣವನ್ನು ಉದ್ಘಾಟಿಸಿ, ಕ್ರೀಡೆಗಳ ಮೂಲಕ ಜಿಲ್ಲೆಯಲ್ಲಿ ಸೌಹಾರ್ದಕ್ಕೆ ನಾಂದಿ ಹಾಡುವ ಕಾರ್ಯ ನಡೆಯುತ್ತಿದೆ. ಯುವಕರು ದೇಶಕ್ಕೆ ಮಾದರಿ ಆಗಬೇಕು. ಕಬಡ್ಡಿ ಮೂಲಕ ಉತ್ತಮ ಸಂದೇಶ ನೀಡುವ ಕಾರ್ಯ ನಡೆಯಬೇಕು ಎಂದರು.
ಜಿ.ಪಂ. ಸದಸ್ಯ ಎಂ.ಎಸ್. ಮಹಮ್ಮದ್, ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ, ಮಮತಾ ಗಟ್ಟಿ, ತಾ.ಪಂ. ಉಪಾ ಧ್ಯಕ್ಷ ಅಬ್ಟಾಸ್ ಅಲಿ, ಸದಸ್ಯೆ ಶೋಭಾ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮಾಧವ ಮಾವೆ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್, ಬಂಟ್ವಾಳ ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲಪಟ್ನೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ಲ ಕುಕ್ಕಿಲ, ಮಾಜಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಇಂಡೇನ್ ಗ್ಯಾಸ್ ಮಾಲಕ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ, ಕಬಡ್ಡಿ ಪಂದ್ಯಾಟದ ಕಾರ್ಯಾಧ್ಯಕ್ಷ ಅರವಿಂದ ರೈ ಮೂರ್ಜೆಬೆಟ್ಟು, ಸಂಘಟನ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಬಿಕ್ನಾಜೆ, ಕೋಶಾಧಿಕಾರಿ ಶಾಹುಲ್ ಹಮೀದ್, ಕೆ.ಎಂ. ಲತೀಫ್ ಪರ್ತಿಪ್ಪಾಡಿ, ಕೊಡಂಗಾಯಿ ಮಾರ್ನಿಂಗ್ ಸ್ಟಾರ್ ಅಧ್ಯಕ್ಷ ಅಜರುದ್ದೀನ್ ಅರಫ, ವಿಟ್ಲಪಟ್ನೂರು ಗ್ರಾ.ಪಂ. ಸದಸ್ಯೆ ಭಾರತಿ ಎಸ್. ಶೆಟ್ಟಿ, ಸಿದ್ದೀಕ್ ಸರವು, ಮಹಮ್ಮದ್ ಶರೀಫ್ ಮೊದಲಾದವರು ಉಪಸ್ಥಿತರಿದ್ದರು. ನೌಫಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು. ಲತೀಫ್ ನೇರಳಕಟ್ಟೆ ಸ್ವಾಗತಿಸಿದರು.