Advertisement

“ವಿವೇಕಾನಂದರ ವ್ಯಕ್ತಿತ್ವ ಎಲ್ಲರಿಗೆ ಪ್ರೇರಣೆ’

07:05 AM Jul 23, 2017 | Team Udayavani |

ನೆಹರೂನಗರ: ವಿದ್ಯಾರ್ಥಿಗಳು ತಮ್ಮ ಶ್ರಮದ ಪ್ರತಿಫಲವಾಗಿ ಒಳ್ಳೆಯ ಅಂಕಗಳನ್ನು ಗಳಿಸಿದ್ದಾರೆ. ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ ಎಲ್ಲರಿಗೆ ಪ್ರೇರಣೆಯಾಗಲಿ ಎಂದು ವಿವೇಕಾನಂದ ಪ.ಪೂ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಹೇಳಿದರು.

Advertisement

ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ  ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ಅಭಿನಂದನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆಯನ್ನು ಗೆದ್ದಂತೆ ಬದುಕನ್ನು ಗೆಲ್ಲಬೇಕು. ಆದ್ದರಿಂದ ಶಿಕ್ಷಣದ ಜತೆ ಜೀವನ ಶಿಕ್ಷಣವನ್ನೂ ಬದುಕಿನ ಜತೆ ಅಳವಡಿಸಿಕೊಳ್ಳಬೇಕು. ಸಹಜ ಕಲಿಕೆಯ ಖುಷಿಯನ್ನು ಅನುಭವಿಸಬೇಕು. ಆಧುನಿಕ ತಂತ್ರಜ್ಞಾನದ ಭರಾಟೆಯ ನಡುವೆಯೂ ಶಿಕ್ಷಣದ ಎಲ್ಲಾ ಆಯಾಮಗಳನ್ನು ಗ್ರಹಿಸುವ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ಈ ಕಾಲೇಜಿನ ಪ್ರತಿನಿಧಿಗಳಾಗಿ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದು ಹಾರೈಸಿದರು.

ಸಂಸ್ಕಾರ ಅಳವಡಿಸಿಕೊಳ್ಳಿ
ಮುಖ್ಯ ಅತಿಥಿಯಾಗಿ ರಕ್ಷಕ-ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ವಸಂತ  ಭಟ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ವನ್ನು ಮೀರಿಸಿದ ಜೀವನ ಪಾಠ ಮುಖ್ಯ.  ಕಠಿನ ಪರಿಸ್ಥಿತಿಯನ್ನು ಎದುರಿಸುವ ಇಚ್ಛಾ ಶಕ್ತಿ, ಆತ್ಮಸ್ಥೈರ್ಯಗಳನ್ನು ಬೆಳೆಸಿಕೊಳ್ಳ ಬೇಕು. ಉತ್ತಮ ಸಂಸ್ಕಾರವನ್ನು ಅಳವಡಿಸಿ ಕೊಂಡಾಗ ವ್ಯಕ್ತಿತ್ವದ ವಿಕಾಸವಾಗುತ್ತದೆ ಎಂದರು. 
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ಯಾಮಲಾ ಭಟ್‌ ಮಾತನಾಡಿ, ಹೆತ್ತವರನ್ನು ಪ್ರೀತಿಸಿ, ಗುರುಗಳನ್ನು ಗೌರವಿಸಿ ಎಲ್ಲರನ್ನೂ ವಿಶ್ವಾಸದಿಂದ ನೋಡಿಕೊಂಡಾಗ ಬದುಕು ಸುಗಮವಾಗುತ್ತದೆ. ಕಾಲೇಜಿನಲ್ಲಿ ಕಲಿತ ವಿದ್ಯಾಲಯದ ಚಿಂತನೆಯನ್ನು ಅನುಷ್ಠಾನ ಗೊಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರಮಿಸಬೇಕು. ಈ ಮೂಲಕ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದೇಶ ಸೇವೆ ಮಾಡುವಂತಾಗಲಿ
ಕಾಲೇಜಿನ ಪ್ರಾಂಶುಪಾಲ ಜೀವನ್‌ ದಾಸ್‌ ಮಾತನಾಡಿ, ಸಾಧಕ ವಿದ್ಯಾರ್ಥಿ ಗಳಿಗೆ ಮಾಡುವ ಸಮ್ಮಾನಗಳು ಎಲ್ಲರ ಪಾಲಿಗೆ ಆಶೀರ್ವಾದವಾಗಿ ಪರಿಣಮಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ಯಾಗಲಿ. ಎಲ್ಲರೂ ಉನ್ನತ ಗುರಿಯನ್ನು ತಲುಪಿ ದೇಶ ಸೇವೆ ಮಾಡುವಂತಾಗಲಿ. ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಸುಂದರ ವಾಗಿರಲಿ ಎಂದು ಹಾರೈಸಿದರು.

Advertisement

ಬಳಿಕ ಮಾತನಾಡಿದ ಅವರು, ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ದೊರೆತ ನಿರಂತರ ಪ್ರೋತ್ಸಾಹವೇ ನನ್ನ ಯಶಸ್ಸಿಗೆ ಕಾರಣ. ಉಪನ್ಯಾಸಕರ ಪಠ್ಯಕ್ರಮ, ಸಲಹೆ ಸೂಚನೆಗಳು ನನ್ನಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿ  ಯಾಗಿವೆ. ಉತ್ತಮ ಶಿಕ್ಷಣವನ್ನು ನೀಡಿದ ವಿದ್ಯಾಸಂಸ್ಥೆ, ಗುರು ಹಿರಿಯರು ಮತ್ತು ಪ್ರೋತ್ಸಾಹಿಸಿದ ತಂದೆ ತಾಯಿ ಯರಿಗೆ ಕೃತಜ್ಞಳಾಗಿದ್ದೇನೆ ಎಂದು ಅಭಿ ಪ್ರಾಯಪಟ್ಟಿದ್ದಾರೆ.

ಸಂಚಾಲಕ ಸಂತೋಷ್‌ ಬಿ., ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾ ರಾಜಿn, ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಲಿಲ್ಲಿ ಡಿ’ಸೋಜಾ, ಜ್ಯೋತ್ಸಾ , ಕೋಶಾಧಿಕಾರಿ ಕೋಟ್ಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶು ಪಾಲ ಪರಮೇಶ್ವರ ಶರ್ಮ  ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಸುಭಾಷ್‌ ಪಟ್ಟಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next