ಹುಬ್ಬಳ್ಳಿ: ಸ್ವಾಮಿ ವಿವೇಕಾನಂದ ಜಯಂತಿ ದಿನದಂದು ಸುಮಾರು 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗದ ಸ್ವಾಮಿ ವಿವೇಕಾನಂದ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಬುಧವಾರ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವ ಜನೋ ತ್ಸವ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಮಹತ್ವದ ಸಹಕಾರಿ ಆಗಲಿದೆ. ಕೇಂದ್ರ ಸರಕಾರ ಜಾರಿ ಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮೊದಲು ಅನು ಷ್ಠಾನಗೊಳಿಸಿದ ರಾಜ್ಯ ನಮ್ಮದಾಗಿದೆ. ಒಲಿಂಪಿಕ್ಸ್‌ಗೆ 75 ಕ್ರೀಡಾಪಟುಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಪ್ರತಿಭಾ ವಂತ ಯುವಕರನ್ನು ದತ್ತು ಪಡೆದು ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಲು ಗ್ರಾಮೀಣ ಕ್ರೀಡಾ ಕೂಟಗಳನ್ನು ಆಯೋಜಿಸ ಲಾಗುತ್ತಿದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆ ಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ. ಜನಸಂಖ್ಯೆ ಎಂದರೆ ಹೊರೆಯಲ್ಲ, ಅದು ಮಾನವ ಸಂಪತ್ತು, ಅದರ ಸದ್ವಿನಿಯೋಗಪಡಿಸಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನಿ ಮೋದಿ ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪ್ರಾರಂಭವಾಗಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿ ಎಂದು ಆಶಿಸಿದರು.
ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ರಾಷ್ಟ್ರೀಯ ಯುವಜನೋತ್ಸವ ರಾಷ್ಟ್ರವನ್ನು ಭೌಗೋಳಿಕ ಹಾಗೂ ಭಾವನಾತ್ಮಕ ವಾಗಿ ಒಂದುಗೂಡಿಸುತ್ತದೆ. ಯುವಕರು ಕೃತಿ ಗಳನ್ನು ಓದುವ ಬದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಮುಂದಾಗಬೇಕು ಎಂದು ಸ್ವಾಮಿ ವಿವೇ ಕಾನಂದರು ಕರೆ ನೀಡಿದ್ದರು. ಉತ್ತಮ ಬದುಕಿನ ಮಾರ್ಗ ತೋರಿದ ನರೇಂದ್ರ ಅವರಾದರೆ, ಪ್ರಧಾನಿ ಮೋದಿ ಅವರು ಗಂಗಾನದಿ ಸ್ವತ್ಛತೆಯ ಆಪರೇಷನ್ ಗಂಗಾ, ಡಿಜಿಟಲ್ ಇಂಡಿಯಾ, ಖೇಲೋ ಇಂಡಿಯಾ, ಯುಪಿಐ ಆ್ಯಪ್, ಕ್ರೀಡೆ, ನವೋದ್ಯಮಕ್ಕೆ ಒತ್ತು ನೀಡುವ ಮೂಲಕ ಯುವಕರಿಗೆ ಹಲವು ಅವಕಾಶಗಳನ್ನು ಕಲ್ಪಿಸಿದ್ದಾರೆ ಎಂದು ಹೇಳಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಷಿ ಮಾತನಾಡಿ, ಯುವ ಭಾರತ ಬಲಿಷ್ಠ ರಾಷ್ಟ್ರವಾಗಿ ರೂಪು ಗೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಯತ್ನಗಳನ್ನು ಕೈಗೊಂಡಿದ್ದಾರೆ. ಹುಬ್ಬಳ್ಳಿ- ಧಾರವಾಡಕ್ಕೆ ಐಐಟಿ, ಐಐಐಟಿ ಇನ್ನಿತರ ಕೊಡುಗೆ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ರಾದ ಪ್ರಹ್ಲಾದ ಜೋಷಿ, ಅನುರಾಗ್ ಸಿಂಗ್ ಠಾಕೂರ್, ನಿತಿಶ್ ಪ್ರಾಮಾಣಿಕ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹಾಲಪ್ಪ ಆಚಾರ್, ಡಾ| ಕೆ.ಸಿ.ನಾರಾಯಣ ಗೌಡ, ಸಿ.ಸಿ. ಪಾಟೀಲ್, ಶಂಕರ ಪಾಟೀಲ್ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸಹಿತ ಹಲವರು ಉಪಸ್ಥಿತರಿದ್ದರು.