Advertisement

12ಕ್ಕೆ ವಿವೇಕಾನಂದ ಜನ್ಮ ದಿನಾಚರಣೆ

09:32 AM Jan 10, 2018 | |

ಬೆಂಗಳೂರು: ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಲ್ಲೂ ಜ.12ರಂದು ಸ್ವಾಮಿ ವಿವೇಕಾನಂದರ 155ನೇ ಜನ್ಮ ದಿನ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ಅವರ ಚಿಂತನೆ ಕುರಿತಾದ ವಿಚಾರ ಗೋಷ್ಠಿ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾಷಣ ಹಾಗೂ ಇನ್ನಿತರ ಕಾರ್ಯಕ್ರಮ ಆಯೋಜಿಸಲು ಸೂಚಿಸಿದೆ. ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು, ಆ ಜಿಲ್ಲೆಗೆ ಸಂಬಂಧಿಸಿದ ಸಚಿವರು, ಸಂಸದರು, ಎಲ್ಲಾ ಶಾಸಕರು, ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶಿಸಿದೆ. 

Advertisement

ಅರಮನೆ ಮೈದಾನದಲ್ಲಿ ಸಮಾವೇಶ: ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರಮನೆ ಮೈದಾನದಲ್ಲಿ ಯುವ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ನಗರದ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next