Advertisement

ಲಖನ್ ಜಾರಕಿಹೊಳಿ ಮತ್ತು ಕವಟಗಿಮಠರನ್ನು ಬೆಂಬಲಿಸುತ್ತೇನೆ: ವಿವೇಕರಾವ ಪಾಟೀಲ

11:57 AM Nov 23, 2021 | Team Udayavani |

ಬೆಳಗಾವಿ: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಜತೆಗೆ ಬಿಜೆಪಿ ಅಭ್ಯರ್ಥಿಗೂ ಬೆಂಬಲ ನೀಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಸ್ಪಷ್ಟಪಡಿಸಿದರು.

Advertisement

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರ ನಿರ್ಧಾರದಂತೆ ಎರಡು-ಮೂರು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಇವತ್ತು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ನಾಮಪತ್ರ ಸಲ್ಲಿಸಲು ಬಂದಿದ್ದೇನೆ ಎಂದು ವಿವೇಕರಾವ್ ಪಾಟೀಲ ತಿಳಿಸಿದರು.

ವಿಧಾನಪರಿಷತ್ ಸದಸ್ಯನಾಗಿದ್ದಾಗ ನಾನು ಕಲಾಪದಲ್ಲಿ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇನೆ ಮಾಡುವಾಗ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದೇನೆ ಈ ಬಾರಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆ ಎಂಬುದು ಗೊತ್ತಿಲ್ಲ. ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಬಿಜೆಪಿಯ ಮಹಾಂತೇಶ ಕವಟಗಿಮಠ ಪರವಾಗಿ ಇರುತ್ತೇನೆ ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ಎರಡು ಮತ ಹಾಕುವುದರಿಂದ ಇಬ್ಬರೂ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ವಿವೇಕರಾವ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next