ವಿವಿ ಪ್ಯಾಟ್ ಕುರಿತು ಮಾಹಿತಿ ನೀಡುವಂತೆ ಜಿಪಂಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೋರ್ಲಪಾಟಿ ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಪಂ ಹಳೆ ಸಭಾಂಗಣದಲ್ಲಿ ಸಾಕ್ಷರ ಭಾರತ ಕಾರ್ಯಕ್ರಮದ ಪ್ರೇರಕರಿಗೆ ಇವಿಎಂ ಮತ್ತು ವಿವಿ ಪ್ಯಾಟ್ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
Advertisement
ಈ ಬಾರಿಯ ಚುನಾವಣೆಯಲ್ಲಿ ಮತದಾನ ಖಾತ್ರಿ ಯಂತ್ರ (ವಿವಿ ಪ್ಯಾಟ್) ಬಳಸಲಾಗುತ್ತಿದ್ದು, ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ವಿವಿ ಪ್ಯಾಟ್ ಯಂತ್ರದಲ್ಲಿ ಮತದಾನ ಮಾಡಿದ ನಂತರ ಏಳು ಸೆಕೆಂಡುಗಳ ಕಾಲ ಮತದಾನ ಮಾಡಿದ ಬಗ್ಗೆ ಮಾಹಿತಿ ಪ್ರದರ್ಶನವಾಗುತ್ತದೆ.