Advertisement

ಡಿ.6ಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತಕ್ಕೆ ಭೇಟಿ

07:25 PM Nov 26, 2021 | Team Udayavani |

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಡಿ.6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿಯವರ ಜತೆಗೆ 21ನೇ ಆವೃತ್ತಿಯ ರಷ್ಯಾ-ಭಾರತ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement

ಈ ಬಗ್ಗೆ ಶುಕ್ರವಾರ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಕಳೆದ ವರ್ಷ ನಡೆಯಬೇಕಿದ್ದ ಶೃಂಗಸಭೆಯನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿತ್ತು.

ಇದೇ ಸಂದರ್ಭದಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಒಪ್ಪಂದಗಳಿಗೂ 2 ದೇಶಗಳು ಸಹಿ ಹಾಕುವ ಸಾಧ್ಯತೆ ಇದೆ. ಅದಕ್ಕೆ ಮುನ್ನ ಮಾಸ್ಕೋದಲ್ಲಿ ಭಾರತದ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ರಷ್ಯಾ ವಿದೇಶಾಂಗ ಸಚಿವ ಸರ್ಗೆ ಶೋಗೂ ಮತ್ತು ವಿದೇಶಾಂಗ ಸಚಿವ ಸರ್ಗೆ ಲಾರ್ವೋ 2+2 ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ:ನಿನ್ನೆ ಬಿಜೆಪಿ ಅಭ್ಯರ್ಥಿ, ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಸಂಸದೆ ಸುಮಲತಾ ಭೇಟಿ

Advertisement

Udayavani is now on Telegram. Click here to join our channel and stay updated with the latest news.

Next