Advertisement

Education: ವೃತ್ತಿಪರ ಕೋರ್ಸ್‌ ಮೊದಲ ಸುತ್ತಿನಲ್ಲಿ ಪ್ರವೇಶಕ್ಕೆ ಅವಕಾಶ

11:33 PM Aug 20, 2023 | Team Udayavani |

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸಹಿತ ವಿವಿಧ ಕೋರ್ಸ್‌ಗಳಿಗೆ ಮೊದಲ ಸುತ್ತಿನ ಸಂಯೋ ಜಿತ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಪ್ರವೇಶ ಪಡೆಯಲು ಆ. 23ರ ವರೆಗೆ ಅವಕಾಶವಿದೆ. ಕಾಲೇಜು/ಕೋರ್ಸ್‌ ಆಯ್ಕೆಗಿದ್ದ ಸಮಯಾ ವಕಾಶವನ್ನು ಆ.22ರ ಬೆಳಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ.23ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ಇರುತ್ತದೆ. ಪ್ರವೇಶ ಪತ್ರಗಳನ್ನು ಡೌನ್ಲೋಡ್‌ ಮಾಡಿಕೊಳ್ಳಲು ಆ.23ರ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು

Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿ ಗಳು ಸಲ್ಲಿಸುವ ಬಾಂಡ್‌ನ‌ಲ್ಲಿ ಮೊದಲನೆ ಪಾರ್ಟಿ ಅಭ್ಯರ್ಥಿ, ಎರಡನೇ ಪಾರ್ಟಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ಸರಕಾರ ಎಂದು ನಮೂದಿಸಬೇಕು ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next