Advertisement

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

07:53 PM May 17, 2024 | Team Udayavani |

ಬೆಳಗಾವಿ: ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ. ಇದರ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನೇಹಾ ಮತ್ತು ಅಂಜಲಿ ಕೊಲೆ ಕೇಸ್‌ನಂತಹ ಪ್ರಕರಣಗಳು ಎಲ್ಲ ಸರ್ಕಾರದಲ್ಲೂ ಸಂಭವಿಸಿವೆ. ಇಂತಹ ಘಟನೆಗಳ ಮೇಲೆ ಪೊಲೀಸ್‌ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು. ಲೋಕೋಪಯೋಗಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಯಲ್ಲಿ 100 ನೂತನ ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 5 ಶಾಲೆಗಳ ನಿರ್ಮಾಣ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next