ಚರ್ಚೆ ನಡೆಯಬಹುದು ಎಂದು ಕಾದು ಕುಳಿತಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯಾಗಿದೆ.
Advertisement
ಸಿದ್ದರಾಮಯ್ಯ ಅವರು ಯುಪಿಎ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರ ನಾಮಪತ್ರ ಸಲ್ಲಿಕೆಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರೂ, ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ಮಾತನಾಡಿಲ್ಲ.
ಸೋನಿಯಾ ಗಾಂಧಿಗೆ ಆಹ್ವಾನ ನೀಡಿ ಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ವಾಪಸ್ ಬಂದ ನಂತರ ಮತ್ತೂಂದು ಬಾರಿ ದೆಹಲಿಗೆ ತೆರಳಿ ಚರ್ಚಿಸಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು. ತ್ರಿಭಾಷಾ ಸೂತ್ರದನ್ವಯ ಹಿಂದಿ ಅಳವಡಿಕೆ: ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಇದುವರೆಗೂ ಘೋಷಣೆ ಮಾಡಿಲ್ಲ. ಆದರೆ, ತ್ರಿಭಾಷಾ ಸೂತ್ರದನ್ವಯ ನಮ್ಮ ಮೆಟ್ರೊದಲ್ಲಿ ಹಿಂದಿ ಭಾಷೆ ಬಳಸಲಾಗಿದೆ. ಮೆಟ್ರೊ ಯೋಜನೆಗೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರದ ಕೊಡುಗೆಯೇ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.