Advertisement

2ನೇ ಜೊತೆ ಸಮವಸ್ತ್ರ ವಿತರಣೆಗೆ ಸಂಪುಟ ಸಭೆ ಅಸ್ತು

11:11 PM Oct 22, 2019 | Team Udayavani |

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಎರಡನೇ ಜೊತೆ ಸಮವಸ್ತ್ರ ವಿತರಿಸಲು ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರಿ ಶಾಲಾ ಮಕ್ಕಳಿಗೆ ಎರಡನೇ ಜೊತೆ ಸಮವಸ್ತ್ರ ವಿತರಣೆ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೈಕೋರ್ಟ್‌ ಆದೇಶದಂತೆ ಎರಡನೇ ಜೊತೆ ಸಮವಸ್ತ್ರ ವಿತರಿಸಲು ಒಪ್ಪಿಗೆ ನೀಡಲಾಗಿದೆ.

Advertisement

ಸಂಪುಟ ಸಭೆಯಲ್ಲಿ ಶಿಕ್ಷಣ ಸಚಿವರು ದಿಢೀರ್‌ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಹಾಗಾಗಿ ವೆಚ್ಚ ಸೇರಿ ಹೆಚ್ಚಿನ ಮಾಹಿತಿಯಿಲ್ಲ ಎಂದು ತಿಳಿಸಿದರು. ಕರ್ನಾಟಕ ರಾಜ್ಯಭಾಷಾ ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದ್ದು, ತಿದ್ದುಪಡಿ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ನಿಯಮಾವಳಿಗಳನ್ನು ರೂಪಿಸಿದಾಗ ಅದನ್ನು ಇಂಗ್ಲಿಷ್‌ನಲ್ಲಿ ರವಾನಿಸಿದಾಗ ರಾಜ್ಯಪಾಲರು ಒಪ್ಪಿಗೆ ನೀಡುತ್ತಿದ್ದಾರೆ.

ಆದರೆ ನಿಯಮಾವಳಿಗಳನ್ನು ಕನ್ನಡಕ್ಕೆ ಭಾಷಾಂತರ ಮಾಡುವಾಗ ಮತ್ತೆ ರಾಜ್ಯಪಾಲರ ಅನುಮೋದನೆ ಪಡೆಯಬೇಕಿತ್ತು. ಬದಲಿಗೆ ಇಲಾಖೆ ಮಟ್ಟದಲ್ಲೇ ಅನುಮೋದನೆ ಪಡೆಯಲು ತಿದ್ದುಪಡಿ ತರಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು. ಕಲಬುರಗಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಚಿವರು ಅಧ್ಯಕ್ಷರಾಗುವ ಜತೆಗೆ ಸ್ಥಳೀಯ ಶಾಸಕರನ್ನೂ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲು ಅವಕಾಶ ಕಲ್ಪಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.

ನೆರೆ ಪ್ರದೇಶದ ಜನ ಸಂಕಷ್ಟದಲ್ಲಿದ್ದರೂ ಸರ್ಕಾರ ಆಯ್ದ ವಿಧಾನಸಭಾ ಕ್ಷೇತ್ರಗಳಿಗೆ ನೂರಾರು ಕೋಟಿ ರೂ. ಅನುದಾನ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಗಳೆಲ್ಲಾ ಜಾರಿ ಯಾಗಲು ಒಂದೆರಡು ವರ್ಷಗಳಾಗಲಿದ್ದು, ಬಜೆಟ್‌ನಲ್ಲಿ ಹಣ ಕಾಯ್ದಿರಿಸಲಾಗುವುದು. ಸದ್ಯಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗುತ್ತಿದ್ದು, ನಾಳೆಯೇ ಹಣ ಬಿಡುಗಡೆ ಮಾಡುವುದಿಲ್ಲ. ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಯೋಜನಾ ಪ್ರಕ್ರಿಯೆಯನ್ನು ಮುಂದು ವರಿಸಲು ಆಡಳಿತಾತ್ಮಕ ಅನುಮೋದನೆ ಸಿಗಲಿದೆ ಎಂದು ಹೇಳಿದರು.

ರಾಜ್ಯದ 15 ವಿಧಾನಸಭೆಗೆ ಉಪಚುನಾ ವಣಾ ವೇಳಾಪಟ್ಟಿ ಮಾರ್ಪಾಡಾಗಿದ್ದು, ನ.11ರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರ ವ್ಯಾಪ್ತಿಗಷ್ಟೇ ನೀತಿ ಸಂಹಿತೆ ಅನ್ವಯವಾಗಲಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಉಪಚುನಾವಣೆ ಘೋಷಣೆಯಾಗಿರುವ ವಿಧಾನಸಭಾ ಕ್ಷೇತ್ರವಿರುವ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಲಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

Advertisement

ಪೊಲೀಸ್‌ ಭವನ – ಸ್ಥಳ ಬದಲಾವಣೆ: ಸಮಗ್ರ ಕೇಂದ್ರಿತ ಕಮಾಂಡ್‌ ಕೇಂದ್ರಕ್ಕಾಗಿ ಪೊಲೀಸ್‌ ಭವನವನ್ನು ಕೆಎಸ್‌ಆರ್‌ಪಿ 1ನೇ ಬೆಟಾಲಿಯನ್‌ನಲ್ಲಿ ನಿರ್ಮಿಸುವ ಪರಿಷ್ಕೃತ ಆಡಳಿತಾತ್ಮಕ ಒಪ್ಪಿಗೆ ನೀಡಲಾ ಗಿದೆ. ಸುಮಾರು 80 ಕೋಟಿ ರೂ.ವೆಚ್ಚದ ಯೋಜನೆಗೆ ಸ್ಥಳ ಬದಲಾವಣೆ ಮಾಡಿ ಪರಿಷ್ಕೃತ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಹಾಗೆಯೇ ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ ಜಾಗದಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್‌ ಆಯುಕ್ತಾಲಯ ಸಂಕೀರ್ಣ ನಿರ್ಮಾಣಕ್ಕೆ ಪರಿಷ್ಕೃತ ಆಡಳಿತಾತ್ಮಕ ಅನು ಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next