Advertisement
ಈಗಿರುವ ಸಂಪುಟದಿಂದ ಐದಾರು ಸಚಿವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ಕಲ್ಪಿಸುವ ಬಗ್ಗೆ ಪಕ್ಷದಲ್ಲಿ ಗಂಭೀರ ಚಿಂತನೆ ನಡೆದಿದೆ. ಈಚೆಗೆ ಮುಡಾ ಹಗರಣ ವಿಷಯವಾಗಿ ವಿಪಕ್ಷಗಳ ಪಾದಯಾತ್ರೆ ಸಂದರ್ಭದಲ್ಲೇ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರಿಗೆ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಬಗ್ಗೆ ಸ್ಪಷ್ಟ ಸುಳಿವು ನೀಡಿದ್ದರು. ಈಗ ಆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಸಿದ್ಧತೆಗಳು ನಡೆದಿವೆ ಎನ್ನಲಾಗಿದೆ.
ಸಚಿವ ಸಂಪುಟ ಪುನಾರಚನೆಗೆ ಚಿಂತನೆ ನಡೆಯುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒತ್ತಡ ಹೆಚ್ಚಿದೆ. ಸಿಎಂ ಮತ್ತು ಡಿಸಿಎಂ ಎರಡೂ ಬಣಗಳಿಂದ ಲಾಬಿ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದಿಲ್ಲಿಗೆ ತೆರಳಿದ್ದು, ಅಲ್ಲಿ ಈ ಸಂಬಂಧ ಹೈಕಮಾಂಡ್ ಜತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮತ್ತೂಂದೆಡೆ ಸಿಎಂ ಬಣದಿಂದ ಸಚಿವರಾದ ಎಚ್.ಸಿ. ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಕೂಡ ದಿಲ್ಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ, ಈ ನಿಟ್ಟಿನಲ್ಲಿ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.