Advertisement

ವಾಂತಿಬೇಧಿ ಪ್ರಕರಣ: ಮೂರು ಮಕ್ಕಳು ಅಸ್ವಸ್ಥ

02:35 PM Apr 06, 2022 | Team Udayavani |

ಸಂಡೂರು: ಸಮೀಪದ ಲಕ್ಷೀಪುರ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ವಾಂತಿಬೇಧಿ ಕಾಣಿಸಿಕೊಂಡಿದ್ದು ಮಂಗಳವಾರ ತೀವ್ರಗೊಂಡ ಕಾರಣ 3 ಮಕ್ಕಳನ್ನು ಬಳ್ಳಾರಿ ವಿಮ್ಸ್ ಗೆ ಕಳುಹಿಸಿಕೊಡಲಾಗಿದೆ ಎಂದು ತಹಶೀಲ್ದಾರ್‌ ಗುರುಬಸವರಾಜ ತಿಳಿಸಿದರು.

Advertisement

ಲಕ್ಷ್ಮೀಪುರ ಗ್ರಾಮಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಅಂಬೇಡ್ಕರ್‌ ಕಾಲೋನಿಯಲ್ಲಿ 125 ಮನೆಗಳಿದ್ದು 755 ಜನರು ವಾಸವಿದ್ದಾರೆ. ಏ.2ರಂದು ನಾಗಪ್ಪ ಅವರ ಮನೆಯಲ್ಲಿ ಏ.2, 3ರಂದು ಮೂರು, 4ರಂದು ಮೂರು ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಒಟ್ಟು 8 ಪ್ರಕರಣಗಳು ಕಂಡು ಬಂದಿವೆ. ಇದರಲ್ಲಿ ಮೂವರನ್ನು ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಲಾಗಿದ್ದು ಉಳಿದ 5 ಜನರಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರು ಹೊಸಪೇಟೆ ಖಾಸಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತಕ್ಷಣ ಇಡೀ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಸರ್ವೇ ಕಾರ್ಯ ಪ್ರಾರಂಭಿಸಿದ್ದಾರೆ. ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಸ್ಥಳದಲ್ಲಿ ವೈದ್ಯರಾದ ಡಾ| ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು.

ಕುಡಿವ ನೀರಿನ ಪೈಪ್‌ಲೈನ್‌ನಲ್ಲಿ ಕಲುಷಿತ ಸೇರಿರುವ ಶಂಕೆ ಇದ್ದು ಪುರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮ ವಹಿಸಲು ಸೂಚಿಸಲಾಗಿದೆ. ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು. ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶಿವಪ್ಪ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ತಾತ್ಕಾಲಿಕಾ ಚಿಕಿತ್ಸೆ ನೀಡುವ ತಂಡದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next