Advertisement

ಸಿಎಂರಿಂದ ವೋಟ್‌ ಬ್ಯಾಂಕ್‌ ರಾಜಕಾರಣ

06:30 AM Feb 01, 2018 | |

ಹುಬ್ಬಳ್ಳಿ: ರಾಜ್ಯ ಸರಕಾರ ವೋಟ್‌ಬ್ಯಾಂಕ್‌ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯಲು ಮುಂದಾಗಿದೆ. ಮುಸ್ಲಿಂರ ತುಷ್ಟೀಕರಣಕ್ಕೆ ರಾಜ್ಯ ಸರಕಾರ ಮುಂದಾಗಿರುವುದು ಖಂಡನೀಯ. ಕೂಡಲೇ ಎಲ್ಲಾ ಕೋಮುಗಲಭೆ, ರೈತ ಹೋರಾಟ ಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸರಕಾರ ವಾಪಸ್‌ ಪಡೆಯಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಒತ್ತಾಯಿಸಿದ್ದಾರೆ.

Advertisement

ಬುಧವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿಗೆ ಇತ್ತೀಚೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಕಾರ್ಯಕ್ರಮ ಹತ್ತಿಕ್ಕುವ ಕಾರಣಕ್ಕೆ ಬಂದ್‌ಗೆ ಕರೆ ನೀಡಲಾಗಿತ್ತು. ಇದೀಗ ಫೆ.4ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಿರುವುದು ಕಾಂಗ್ರೆಸ್‌ನ ಕುತಂತ್ರವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next