Advertisement

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ

04:15 PM Apr 07, 2022 | Team Udayavani |

ಚಳ್ಳಕೆರೆ: ರಾಷ್ಟ್ರದಲ್ಲಿ ಸಂಸತ್‌ ಸದಸ್ಯರಿಂದ ಗ್ರಾಮ ಪಂಚಾಯಿತಿ ಸದಸ್ಯರ ತನಕ ಅತಿ ಹೆಚ್ಚಿನ ಸಂಖ್ಯೆಯ ಚುನಾಯಿತ ಪ್ರತಿನಿ ಧಿಗಳು ಭಾರತೀಯ ಜನತಾ ಪಕ್ಷದವರಾಗಿದ್ದಾರೆ. ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ರವರ ಆಶಯಗಳನ್ನು ಈಡೇರಿಸುವಲ್ಲಿ ದೃಢ ಹೆಜ್ಜೆ ಇಟ್ಟಿದೆ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ನವೀನ್‌ ಹೇಳಿದರು.

Advertisement

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಹಲವಾರು ದಶಕಗಳಿಂದ ರಾಷ್ಟ್ರವನ್ನಾಳಿದ ಕಾಂಗ್ರೆಸ್‌ ಪಕ್ಷದ ನಾಯಕರು ಕೇವಲ ಮತ ಬ್ಯಾಂಕ್‌ ದೃಷ್ಟಿಯಿಂದ ಆಡಳಿತ ನಡೆಸಿದರು. ರಾಜ್ಯದಲ್ಲಿ ಇತ್ತೀಚಿನ ಹಲವಾರು ಬೆಳವಣಿಗೆಗಳ ಬಗ್ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಒಂದು ಸಮುದಾಯವನ್ನು ಓಲೈಸುವ ಮೂಲಕ ರಾಜಕೀಯ ಶಕ್ತಿಯನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಬಹುಸಂಖ್ಯಾತ ಹಿಂದೂಗಳ ಭಾವನೆ ಬಗ್ಗೆ ಅವರಿಗೆ ಗೌರವವಿಲ್ಲ ಎಂದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದುಮತಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಸಮುದಾಯಕ್ಕೆ ಅನೇಕ ಯೋಜನೆಗಳ ಮೂಲಕ ನೆರವು ನೀಡುತ್ತಿದೆ. ಮಹಿಳೆಯ ಮೇಲೆ ಆಗುವ ದೌರ್ಜನ್ಯಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮ ಕೈಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳೆಯರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ಮಹಿಳೆ ಸುಭಿಕ್ಷಳು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ. ಜಯಪಾಲಯ್ಯ, ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್‌, ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್‌, ಕಾರ್ಯದರ್ಶಿ ಬಸವರಾಜು, ಶಶಿಧರ ರೆಡ್ಡಿ, ಉಪಾಧ್ಯಕ್ಷ ಟಿ.ಜೆ. ತಿಪ್ಪೇಸ್ವಾಮಿ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಕರೀಕೆರೆ ತಿಪ್ಪೇಸ್ವಾಮಿ, ತಾಲೂಕು ರೈತ ಮೋರ್ಚಾ ಅಧ್ಯಕ್ಷ ನವೀನ್‌ಕುಮಾರ್‌ ನಾಯಕ, ಹಿರಿಯ ಸಹಕಾರಿ ಧುರೀಣ ಸಿ.ಬಿ. ಆದಿಭಾಸ್ಕರ ಶೆಟ್ಟಿ, ಫಾಲನೇತ್ರ, ಎಂ. ಇಂದ್ರೇಶ್‌, ಜಗದಾಂಬೆ, ಹೊಸಮನೆ ಮನೋಜ್‌, ವೀರೇಶ್‌, ನಗರ ಘಟಕದ ಅಧ್ಯಕ್ಷ ಈಶ್ವರ ನಾಯಕ, ಮಾತೃಶ್ರೀ ಎನ್‌. ಮಂಜುನಾಥ, ಜಿ.ಕೆ. ತಿಪ್ಪೇಶ್‌, ಬಡಕ್ಕ, ಕಾಂತರಾಜು, ಚಿದಾನಂದ, ಮೋಹನ್‌ ಮುಂತಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next