Advertisement

ಮರು ಎಣಿಕೆಗೆ ಅವಕಾಶ ನೀಡದಂತೆ ಮತ ಎಣಿಕೆ’

12:20 AM May 20, 2019 | Sriram |

ಉಡುಪಿ: ಮರು ಮತ ಎಣಿಕೆಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸಬೇಕು ಎಂದು ವೀಕ್ಷಕ‌ ಕೃಷ್ಣ ಕುನಾಲ್ ನಿರ್ದೇಶನ ನೀಡಿದರು.

Advertisement

ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರವಿವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿರುವ ಎಣಿಕೆ ಸಹಾಯಕರು, ಎಣಿಕೆ ಮೇಲ್ವಿಚಾರಕರು ಮತ್ತು ಮೈಕ್ರೋ ಅಬ್ಸರ್ವರ್‌ಗಳಿಗೆ ನಡೆದ 2ನೇ ಹಂತದ ಮತ ಎಣಿಕೆ ತರಬೇತಿಯಲ್ಲಿ ಅವರು ಮಾತನಾಡಿದರು.

ಸೈಂಟ್ ಸಿಸಿಲಿ ಶಾಲೆಯಲ್ಲಿ ಮೇ 23 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬಂದಿ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗ ಸೂಚಿಯ ಅನ್ವಯದಂತೆ ಕಾರ್ಯ ನಿರ್ವಹಿ ಸಬೇಕು ಎಂದು ಸೂಚಿಸಿದರು.

ಮತ ಎಣಿಕೆ ಕಾರ್ಯದಲ್ಲಿ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಕರ್ತವ್ಯ ನಿರ್ವಹಿಸುವುದರೊಂದಿಗೆ ಎಣಿಕೆ ಕಾರ್ಯದ ಫ‌ಲಿತಾಂಶವು, ಮರು ಮತ ಎಣಿಕೆಗೆ ಅವಕಾಶ ನೀಡದಂತಿರಬೇಕು. ಅಂಚೆ ಮತ ಪತ್ರಗಳ ಎಣಿಕೆಯಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು. ಅಂಚೆ ಮತಗಳು ಪತ್ರ ತಿರಸ್ಕೃತವಾದರೆ ಸೂಕ್ತ ಕಾರಣಗಳನ್ನು ನಮೂದಿಸಿ ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲೆಯ ಎಲ್ಲ ಸಹಾಯಕ ಚುನಾ ವಣಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next