ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಮೇ 23ರಂದು ನಡೆಯಲಿದ್ದು, ಗುರುವಾರ ಮಹಾರಾಣಿ ಕಾಲೇಜಿನಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ ಸಿಬ್ಬಂದಿಗೆ ಮತ ಎಣಿಕೆ ತರಬೇತಿ ನೀಡಲಾಯಿತು.
Advertisement
ಎನ್‌ಆರ್‌ಒ ಮತ ಎಣಿಕಾ ಸಿಬ್ಬಂದಿ, ಮೇಲ್ವಿಚಾರಕರು ಮತ್ತು ಕೌಂಟಿಂಗ್ ಅಸಿಸ್ಟೆನ್ಸ್‌ಗಳಿಗೆ ಮತ ಎಣಿಕೆಯಾವ ರೀತಿ ಮಾಡಬೇಕು, ಎಲೆಕ್ಟ್ರಾನಿಕ್ ಯಂತ್ರಗಳಲ್ಲಿ ಎಣಿಕೆಯಾಗುವ ಮತಗಳ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡುವುದು ಹೇಗೆ ಎಂಬ ಬಗ್ಗೆ ತರಬೇತಿ ನೀಡಲಾಗಿದೆ. ತರಬೇತಿ ಕಾರ್ಯಾಗಾರದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಚುನಾವಣಾಧಿಕಾರಿ ವಿಜಯ್ ಶಂಕರ್ ಹಾಜರಿದ್ದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತಯಂತ್ರಗಳನ್ನು ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ನಲ್ಲಿ ಇಡಲಾಗಿದೆ.