Advertisement

ಉಡುಪಿ: ಮತ ಎಣಿಕೆಗೆ ಅಂತಿಮ ಹಂತದ ಸಿದ್ಧತೆ

11:54 AM May 22, 2019 | keerthan |

ಉಡುಪಿ: ನಗರದ ಸೈಂಟ್‌ ಸಿಸಿಲೀಸ್‌ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿದೆ.

Advertisement

ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ವೀಕ್ಷಕ ನಿತೇಶ್ವರ ಕುಮಾರ್‌ ಅವರು ಮಂಗಳವಾರ ಕೇಂದ್ರಕ್ಕೆ ಆಗಮಿಸಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ವೇಳೆ ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು. ಗುರುವಾರ ಬೆಳಗ್ಗೆ 7.30ಕ್ಕೆ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭ ವಾಗಲಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿ, ಸಿಬಂದಿಗೆ ಈಗಾಗಲೇ ಎರಡು ಹಂತಗಳ ತರಬೇತಿ ನೀಡಲಾಗಿದೆ. ಅಧಿಕಾರಿ, ಸಿಬಂದಿ, ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಚುನಾವಣಾ ಅಭ್ಯರ್ಥಿಗಳ ಪರ ಏಜೆಂಟರಿಗೆ ಪಾಸ್‌ಗಳನ್ನು ನೀಡಲಾಗಿದೆ. ಪಾಸ್‌ ಇಲ್ಲದ ಯಾರಿಗೂ ಒಳಗೆ ಪ್ರವೇಶವಿಲ್ಲ. ಅಧಿಕಾರಿಗಳ ಸಹಿತ ಯಾರೂ ಮೊಬೈಲ್‌ ಫೋನ್‌ಗಳನ್ನು ಮತ ಎಣಿಕೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ. ಮತ ಎಣಿಕೆ ನಡೆದು ಪ್ರತಿಯೊಂದು ಸುತ್ತಿನ ಮತ ಗಳಿಕೆ ಮಾಹಿತಿಯನ್ನು ತ್ವರಿತವಾಗಿ ಸಾರ್ವಜನಿಕರಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೂರು ಹಂತಗಳ ಭದ್ರತೆ
ಮತ ಎಣಿಕೆ ಕೇಂದ್ರಕ್ಕೆ 3 ಹಂತಗಳ ಭದ್ರತೆಯನ್ನು ಒದಗಿಸಲಾಗುತ್ತಿದೆ. ಸುಮಾರು 300 ಪೊಲೀಸರ ನ್ನೊಳ ಗೊಂಡ ಜಿಲ್ಲಾ ಪೊಲೀಸ್‌, ಕೆಎಸ್‌ಆರ್‌ಪಿಯ 3 ತಂಡ ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ ಪಿಎಫ್)ಯ ಒಂದು ತುಕಡಿ ಭದ್ರತೆ ನಿರ್ವಹಿಸಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ತಿಳಿಸಿದರು.  ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next