Advertisement

ಕಾಂಗ್ರೆಸ್‌ಗೆ ಮತ ಹಾಕಿ: ಮಾತೆ ಮಹಾದೇವಿ ಕರೆ 

06:20 AM Apr 08, 2018 | Team Udayavani |

ಬೆಂಗಳೂರು:ಲಿಂಗಾಯತರಿಗೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವಂತೆ ಶಿಫಾರಸ್ಸು ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಮತ ನೀಡಲಾಗುವುದು ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಘೋಷಿಸಿದ್ದಾರೆ.

Advertisement

ಲಿಂಗಾಯತ ಮಠಾಧೀಶರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಲಿಂಗಾಯತರಿಗೆ  ಪ್ರತ್ಯೇಕ ಮಾನ್ಯತೆ ನೀಡಿದರೆ ಬಿಜೆಪಿಗೆ ಬೆಂಬಲ ನೀಡುವುದಾಗಿ ಪಂಚ ಪೀಠಾಧೀಶರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. 

ಆದರೆ, ಅವರ ಬೆದರಿಕೆಯನ್ನೂ ಲೆಕ್ಕಿಸದೆ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಹೀಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಇದು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದ್ದು, ನಮಗೆ ಸಹಕಾರ ನೀಡಿದವರಿಗೆ ನಾವು ಸಹಕಾರ ನೀಡುವುದು ನಮ್ಮ ಧರ್ಮ ಎಂದು ಹೇಳಿದ ಮಾತೆ ಮಹದಾದೇವಿ,  ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸ್ಸು ಬಗ್ಗೆ  ಕೇಂದ್ರ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 18 ರ ಬಸವ ಜಯಂತಿ ದಿನ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಕೊಡುಗೆ ನೀಡಬೇಕು ಎಂದು ಒತ್ತಾಯಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next