Advertisement

ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ

07:42 PM Mar 06, 2018 | Team Udayavani |

ಬಳ್ಳಾರಿ: ಹದಿನೆಂಟು ವರ್ಷ ತುಂಬಿದ ಎಲ್ಲ ಯುವ ಜನರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ನಿಮ್ಮ ಮತ, ನಿಮ್ಮ ಭವಿಷ್ಯ ಎಂದು ಜಿಪಂ ಸಿಇಒ ಹಾಗೂ ಸ್ವೀಪ್‌ ಸಮಿತಿ ಮುಖ್ಯಸ್ಥ ಡಾ| ಕೆ.ವಿ.ರಾಜೇಂದ್ರ ಮತದಾರರಿಗೆ ಕರೆ
ನೀಡಿದರು.

Advertisement

ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಸಹಭಾಗಿತ್ವ ಸಮಿತಿ (ಸ್ವೀಪ್‌-2018) ವತಿಯಿಂದ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ನೂರಕ್ಕೂ ಅಧಿಕ ಎತ್ತಿನ ಬಂಡಿಗಳ ಮೂಲಕ ಮತದಾನದ ಮಹತ್ವದ ಸಂದೇಶ ಸಾರುವ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ವಿವೇಚನೆಯಿಂದ ಹಾಕಿದ ಮತ ದೇಶಕ್ಕೆ ಹಿತ. ನಮ್ಮ ಮತಗಳನ್ನು ಚಲಾಯಿಸುವುದರ ಮೂಲಕ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಹೆಮ್ಮೆಯನ್ನು ಎತ್ತಿ ಹಿಡಿಯೋಣ
ಎಂದರು. 

ಗ್ರಾಮದ ಯುವಕರು, ವಿದ್ಯಾರ್ಥಿಗಳು ಮತದಾನದ ಮಹತ್ವ ಸಾರುವ ಸಂದೇಶಗಳು ಕೂಗುತ್ತಿದ್ದುದು ಮೆರವಣಿಗೆಯಲ್ಲಿ ಗಮನ
ಸೆಳೆಯಿತು. ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ಎತ್ತಿನ ಬಂಡಿಗಳು ಪಾಲ್ಗೊಂಡಿದ್ದವು. ಎತ್ತುಗಳಿಗೆ ಸಿಂಗರಿಸಿದ್ದರೆ ಬಂಡಿಯ ಮೇಲೆ ಮತದಾನದ ಮಹತ್ವ ಸಾರುವ ಸಂದೇಶಗಳ ಫಲಕಗಳು ಎದ್ದು ಕಾಣುತ್ತಿದ್ದವು. ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್‌, ಕೃಷಿ ಉಪ ನಿರ್ದೇಶಕ ಎಸ್‌.ಎಸ್‌ .ಪಾಟೀಲ್‌, ಜಿಪಂ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ , ತಾಪಂ ಇಒ ಜಾನಕಿರಾಮ್‌ ಸೇರಿದಂತೆ ಅನೇಕ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು, ಯುವಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ಮತ 
ಚಲಾಯಿಸಬೇಕು. ವಿವೇಚನೆಯಿಂದ ಹಾಕಿದ ಮತ ದೇಶಕ್ಕೆ ಹಿತ. ನಮ್ಮ ಮತಗಳನ್ನು ಚಲಾಯಿಸುವ ಮೂಲಕ ಜಗತ್ತಿನ ಅತಿದೊಡ್ಡ
ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಹೆಮ್ಮೆಯನ್ನು ಎತ್ತಿ ಹಿಡಿಯೋಣ. 

 ಡಾ|ಕೆ.ವಿ.ರಾಜೇಂದ್ರ, ಜಿಪಂ ಸಿಇಒ.

Advertisement

Udayavani is now on Telegram. Click here to join our channel and stay updated with the latest news.

Next