Advertisement

ಮತಯಂತ್ರ ಹ್ಯಾಕ್‌ ಆರೋಪಿಸಿ ಧರಣಿ

12:58 PM May 18, 2018 | Team Udayavani |

ಮೈಸೂರು: ವಿಧಾನಸಭಾ ಚುನಾವಣಾ ಫ‌ಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮತ ಯಂತ್ರಗಳನ್ನು ಹ್ಯಾಕ್‌ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತಂತೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಚುನಾವಣೆಯಲ್ಲಿ ಮತಯಂತ್ರಗಳನ್ನು ಹ್ಯಾಕ್‌ ಮಾಡಲಾಗಿದ್ದು, ಹೀಗಾಗಿ ಚುನಾವಣಾ ಪ್ರಕ್ರಿಯೆ ಮೇಲೆ ಅನುಮಾನ ಮೂಡಿದೆ ಎಂದು ದೂರಿದರು.

ಪ್ರಮುಖವಾಗಿ ನಗರದ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಂತ್ರವನ್ನು ಹ್ಯಾಕ್‌ ಮಾಡಿರುವ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ನಾಲ್ಕು ಮಂದಿಯನ್ನು ಸ್ಥಳೀಯರು ವಿಚಾರಣೆ ನಡೆಸಿದ ವೇಳೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಮತಯಂತ್ರವನ್ನು ಹ್ಯಾಕ್‌ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.

ಇದು ಇಡೀ ಚುನಾವಣಾ ಪ್ರಕ್ರಿಯೆ ಮೇಲೆ ಅನುಮಾನ ಮೂಡುವಂತೆ ಮಾಡಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಬಿ.ಜೆ.ವಿಜಯ ಕುಮಾರ್‌, ನಗರ ಪಾಲಿಕೆ ಸದಸ್ಯರಾದ ಸುನಿಲ್‌ಕುಮಾರ್‌, ಜಗದೀಶ್‌ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next